







ಪುತ್ತೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ಯು ಆರ್ ರಾವ್ ಉಪಗ್ರಹ ಕೇಂದ್ರ ಬೆಂಗಳೂರು ಸಹಯೋಗದಲ್ಲಿ ವಿಶ್ವ ಬಾಹ್ಯಾಕಾಶ ಸಪ್ತಾಹ-2026 ಕಾರ್ಯಕ್ರಮ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಈ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸುಮಾರು 900 ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಉಪಗ್ರಹ ಮಾದರಿ ತಯಾರಿ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.10ನೇ ತರಗತಿಯ ವಿದ್ಯಾರ್ಥಿ ಶುಭನ್ ಪಿ.ಕೆ (ಪದ್ಮನಾಭ ಕೆ ಮತ್ತು ರೇಖಾ ಪಿ ನಾಯ್ಕ್ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ಅನುದೀಪ್ ರೈ ಡಿ (ಶಿವಶ್ರೀರಂಜನ್ ರೈ ಡಿ ಮತ್ತು ಪ್ರತಿಭಾ ದಂಪತಿಗಳ ಪುತ್ರ) ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













