ಸವಣೂರು :ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0

ಸವಣೂರು: ಸಮೀಪದ ಪರಣೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತರನ್ನು ಪರಣೆ ನಿವಾಸಿ ಸುರೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಮನೆಗೆ ಹೇಳದೆ ಕಾಣೆಯಾಗಿದ್ದ ಅವರು ಇಂದು ಸ್ಥಳೀಯ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ನಾಲ್ಕು ದಿನಗಳ ಹಿಂದೆ ಸುರೇಶ್ ನಾಪತ್ತೆ ಬಗ್ಗೆ ಮನೆಯವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಇದೀಗ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here