







ಸವಣೂರು: ಶ್ರೀ ಶಾರದಾಂಬಾ ಸೇವಾ ಸಂಘ ಸವಣೂರು ಇದರ ವತಿಯಿಂದ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.20 ರಂದು ನಡೆಯಲಿದೆ.


ಕಾರ್ಯಕ್ರಮದಲ್ಲಿ ಅ.20ರಂದು ಬೆಳಿಗ್ಗೆ ಉದಯ ಕುಮಾರ್ ಸರ್ವೆ ಅವರು ಧ್ವಜಾರೋಹಣ ನೆರವೇರಿಸುವರು. ಬಳಿಕ ಶ್ರೀ ದೇವಿಯ ಪ್ರತಿಷ್ಟೆ, ಗಣ ಹೋಮ, ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.



ಬೆಳಿಗ್ಗೆ 11.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ವಹಿಸುವರು.ಆಲಂಕಾರು ಭಾರತೀ ವಿದ್ಯಾಸಂಸ್ಥೆಯ ಶಿಕ್ಷಕ ಚಂದ್ರಹಾಸ ಕೆ. ಅವರು ಧಾರ್ಮಿಕ ಉಪನ್ಯಾಸ ನೀಡುವರು.ನಿವೃತ್ತ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ಸರ್ವೆ ಅತಿಥಿಗಳಾಗಿ ಪಾಲ್ಗೊಳ್ಳುವರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಶ್ರೀನಿವಾಸ ಆಚಾರ್ಯ ,ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಸುಬ್ಬಣ್ಣ ರೈ ಖಂಡಿಗ,ಪುತ್ತೂರು ತಾಲೂಕು ಕಚೇರಿಯ ನಿವೃತ್ತ ಪ್ರಥಮ ದರ್ಜೆ ಸಹಾಯಕಿ ಪಿ.ಮಲ್ಲಿ ಸೋಮನಾಥ ಕನ್ಯಾಮಂಗಲ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.ಮಧ್ಯಾಹ್ನ 1.30ರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪದ್ಮಾವತಿ ಕ್ರಿಯೇಷನ್ಸ್ ಸವಣೂರು ಇವರಿಂದ ಭಕ್ತಿ ಭಾವ ಗಾಯನ ನಡೆಯಲಿದೆ.
ಸಂಜೆ 4.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ಶಾರದಾ ಮೂರ್ತಿಯ ವಿಜೃಂಭಣೆಯ ಶೋಭಾಯಾತ್ರೆಯು ಮುಖ್ಯ ರಸ್ತೆಯಲ್ಲಿ ಸಾಗಿ ಸರ್ವೆ ಗೌರಿ ಹೊಳೆಯಲ್ಲಿ ಶ್ರೀಶಾರದಾ ಮೂರ್ತಿಯ ಜಲಸ್ಥಂಬನ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ,ಅಧ್ಯಕ್ಷ ವಸಂತ ರೈ ಸೊರಕೆ,ಕಾರ್ಯದರ್ಶಿ ವೆಂಕಪ್ಪ ಗೌಡ ಅಡೀಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










