ಅ.21 : ಪುತ್ತೂರು ಬಂಟರ ಭವನದಲ್ಲಿ ಪಿಲಿ ಪಜ್ಜೆ- ಹೇಮನಾಥ ಶೆಟ್ಟಿ

0

ಪುತ್ತೂರು: ಬಂಟರ ಸಂಘ ಪುತ್ತೂರು ತಾಲ್ಲೂಕು ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲ್ಲೂಕು ಸಮಿತಿ, ತಾಲ್ಲೂಕು ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಯೋಗದಲ್ಲಿ ಅ.21ರಂದು ಸಂಜೆ 4 ರಿಂದ ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದದಲ್ಲಿ ಆಯುಧ ಪೂಜೆ, ಬಂಟೆರೆ ಜಾಲ್ ಡ್ ಪಿಲಿ ಪಜ್ಜೆ ಕಾರ್ಯಕ್ರಮ ಜರಗಲಿದೆ.

ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ವಹಿಸಲಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಸೀತಾರಾಮ ರೈ ಸವಣೂರು, ಶಶಿಕುಮಾರ್ ರೈ ಬಾಲ್ಯೋಟ್ಟು, ಜಗನ್ನಾಥ ರೈ ಮಾದೋಡಿ, ದಯಾನಂದ ರೈ ಮನವಳಿಕೆಗುತ್ತು, ಲಕ್ಷ್ಮೀನಾರಾಯಣ ಶೆಟ್ಟಿ ಅರಿಯಡ್ಕ , ಬೂ‌ಡಿಯಾರ್ ರಾಧಾಕೃಷ್ಣ ರೈ, ಮಾತೃ ಸಂಘದ ನಿಕಟಪೂರ್ವ ‌ಸಂಚಾಲಕ ಕುಂಬ್ರ ದುರ್ಗಾ ಪ್ರಸಾದ್ ರೈ , ಸಂಚಾಲಕ ಸಹಕಾರರತ್ನ‌ ದಂಬೆಕ್ಕಾನ ಸದಾಶಿವ ರೈ , ಸಹ ಸಂಚಾಲಕ ಸಾಜ ರಾಧಾಕೃಷ್ಣ ರೈ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ‌‌ಗೀ‌ತಾ ಮೋಹನ್ ರೈ, ಯುವ ಬಂಟರ ವಿಭಾಗದ ಅಧ್ಯಕ್ಷ ‌ಭಾ‌‌ಗ್ಯೇಶ್ ರೈ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಅಧ್ಯಕ್ಷ ಸ‌ಮೃದ್ದ್ ಡಿ.ಶೆಟ್ಟಿ ಅವರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಂಟ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಹಾಗೂ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here