ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ: ಉತ್ತಮ ಸ್ಪಂದನೆ – ಕೊನೆಯ ಎರಡು ದಿನ ಮಾತ್ರ

0

ಪುತ್ತೂರು: ವಿಜಯದಶಮಿ ಸಂಭ್ರಮದ ಪ್ರಯುಕ್ತ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಿಶೇಷ ಕೊಡುಗೆ ನೀಡಲಾಗುತ್ತಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕೊಡುಗೆ ಇನ್ನು ಎರಡು ದಿನ ಮಾತ್ರ ಲಭ್ಯವಾಗಲಿದೆ.

ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಮೇಲೆ ಗರಿಷ್ಠ ರೂ. 600 ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ಫ್ಲಾಟ್ ರೂ. 8,000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ. 8,000 ರಿಯಾಯಿತಿ ನೀಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ವಜ್ರಾಭರಣ ನೀಡುವುದರ ಜೊತೆಗೆ ಪ್ರತಿ ಕ್ಯಾರೆಟ್‌ಗೆ ರೂ. 8,000 ವಿಶೇಷ ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದ್ದು, ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್‌ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವೂ ಇದೆ. ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸ ಗಳಿಸಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಿಜಯದಶಮಿ ಮತ್ತು ನವರಾತ್ರಿ ಪ್ರಯುಕ್ತ ಸಾಂಪ್ರದಾಯಿಕ ಮತ್ತು ಆಧುನಿಕ ವಿನ್ಯಾಸಗಳ ವೈವಿಧ್ಯಮಯ ಸಂಗ್ರಹ ಲಭ್ಯವಿದೆ.

LEAVE A REPLY

Please enter your comment!
Please enter your name here