ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಕ್ಷರಾಭ್ಯಾಸ, ಸರಸ್ವತಿ ಪೂಜೆ ಮೂಲಕ ನವರಾತ್ರಿ ಉತ್ಸವ ಸಂಪನ್ನ

0

ಬಡಗನ್ನೂರು:  ದೇಯಿ ಬೈದ್ಯೆತಿ ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ  ನವರಾತ್ರಿ ಉತ್ಸವದ  ಅ 20ರಂದು ಸಂಪನ್ನಗೊಂಡಿತು.ಅ.20 ರಂದು  ಅಕ್ಷರಾಭ್ಯಾಸ ಹಾಗೂ ಸರಸ್ವತಿ ಪೂಜೆ ಭಕ್ತಿಭಾವದಿಂದ ನೆರವೇರಿಸಲಾಯಿತು.

ಕ್ಷೇತ್ರದ ತಂತ್ರಿವರ್ಯರಾದ ಶಿವಾನಂದ ಶಾಂತಿಯವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ವಿದ್ಯಾದೇವತೆ ಸರಸ್ವತಿಯ ಆರಾಧನೆಯೊಂದಿಗೆ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಜ್ಞಾನಾರ್ಜನೆಯ ಶುಭಾರಂಭಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೌರವಾಧ್ಯಕ್ಷ ಜಯಂತ ನಡುಬೈಲ್, ನವರಾತ್ರಿ ಉತ್ಸವದ ಸಂಚಾಲಕ ಹರೀಶ್ ಕೆ. ಪೂಜಾರಿ, ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ, ಸರ್ವಜ್ಞ ಐ.ಎ.ಎಸ್. ಅಕಾಡೆಮಿಯ ಸುರೇಶ್ ಎಂ.ಎಸ್., ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು, ಧರ್ಮರಾಜ್ ಅಮ್ಮುಂಜೆ  ಚಂದ್ರಹಾಸ ಉಚ್ಚಿಲ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕರಾಯ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ ವತಿಯಿಂದ ನವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾದರು. 

LEAVE A REPLY

Please enter your comment!
Please enter your name here