ಕಡಬದ ಅಡಿಗ ಮೋಟಾರ್ಸ್ ನಲ್ಲಿ ಸಂಭ್ರಮದ ಆಯುಧ ಪೂಜೆ

0

ದಶಮಾನೋತ್ಸವ ಅಂಗವಾಗಿ ಸರಕಾರಿ ಶಾಲೆಗೆ ಸ್ಮಾರ್ಟ್ ಟಿವಿ ಕೊಡುಗೆ

ಕಡಬ: ಕಡಬ ತಾಲೂಕಿನಲ್ಲಿ ಕಳೆದ 10 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ವಿಶ್ವಾಸಾರ್ಹ ಹೆಸರಾಗಿ ಗುರುತಿಸಿಕೊಂಡಿರುವ, ಟಿವಿಎಸ್ ಕಂಪನಿಯ ಕಡಬ ತಾಲೂಕಿನ ಏಕೈಕ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಇಂದು ಆಯುಧ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.

ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆಮಾಡಿರುವ ಹಿನ್ನೆಲೆಯಲ್ಲಿ, ಸಂಸ್ಥೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳ ಹಾಗೂ ಗ್ರಾಹಕರ ಸುಮಾರು 30ಕ್ಕೂ ಅಧಿಕ ವಾಹನಗಳ ಪೂಜೆ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಳಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಡಬದ ವಿದ್ಯಾರ್ಥಿಗಳ ಸ್ಮಾರ್ಟ್ ಕ್ಲಾಸ್ ಅನುಕೂಲಕ್ಕಾಗಿ ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು. ಶಾಲೆಯ ಪರವಾಗಿ ಮುಖ್ಯೋಪಾಧ್ಯಾಯರಾದ ಶ್ರೀ ಹಾಲೇಶ್ ನಾಯಕ್ ಅವರು ಸ್ಮಾರ್ಟ್ ಟಿವಿಯನ್ನು ಸ್ವೀಕರಿಸಿದರು.ಸಂಸ್ಥೆಯ ಮಾಲೀಕರು, ಸಿಬ್ಬಂದಿ ವರ್ಗ ಹಾಗೂ ಗ್ರಾಹಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here