ನೆಲ್ಯಾಡಿ: ನಿಂತಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ವಿದ್ಯಾರ್ಥಿ ದಾರುಣ ಸಾವು

0

ನೆಲ್ಯಾಡಿ: ನಿಂತಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಅ.22ರಂದು ಮುಂಜಾನೆ ನಡೆದಿದೆ.


ನೆಲ್ಯಾಡಿ ಪ್ಲೇವರ್ಸ್ ಹೋಟೆಲ್ ಮಾಲಕ ಜೋಜೋ ಟಿ.ಜೋರ್ಜ್ ಅವರ ಪುತ್ರ, ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅನ್ವಿನ್ ಜೋಜೋ ಜೋರ್ಜ್ (16ವ.) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅ.22ರಂದು ಮುಂಜಾನೆ ಸುಮಾರು 1 ಗಂಟೆಯ ವೇಳೆಗೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅನ್ವಿನ್ ಜೋಜೋ ಜೋರ್ಜ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಯ ಕುರಿತು ಹೆಚ್ಚಿನ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here