







ವಿದ್ಯಾರ್ಥಿಗಳ ಭವಿಷ್ಯ ವನ್ನು ರೂಪಿಸುವ ಇಬ್ರಾಹಿಂ ರವರoತಹ ಶಿಕ್ಷಕರು ಇಂದಿನ ಅವಶ್ಯಕತೆ : ತೆಕ್ಕಿಲ್


ಪುತ್ತೂರು: ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ, ಜಿಲ್ಲಾ ಪ. ಪೂ ಉಪನ್ಯಾಸಕರ ಸಂಘದ ಅಧ್ಯಕ್ಷ ಸಂಪ್ಯ ನಿವಾಸಿ ಇಬ್ರಾಹಿಂ ಬಿ. ರವರು ಶಾಲಾ ಶಿಕ್ಷಣ ಇಲಾಖೆಯಿಂದ 2026 ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಗೆ ಭಾಜನರಾದ ಹಿನ್ನಲೆಯಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಸ್ತಿನ ಸಿಪಾಯಿಯಾಗಿ, ಸಂಘಟನೆ, ಸೌಹಾರ್ದ ತೆ ಮತ್ತು ಸಮನ್ವಯತೆಗೆ ಹೆಚ್ಚು ಒತ್ತು ನೀಡಿರುವ ಇಬ್ರಾಹಿಂ ರವರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕಾರ್ಯ ಶೈಲಿ ಅಭಿನಂದನೀಯ ಎಂದರು.
ಈ ಸಂದರ್ಭದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಅಧ್ಯಕ್ಷ ಕೆ. ಬಿ. ಇಬ್ರಾಹಿಂ, ಜಮ್ಮಿಯ್ಯತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಅಡ್ವೋಕೇಟ್ ಮೂಸ ಪೈoಬಚ್ಚಾಲ್ ಮೊದಲಾದವರು ಉಪಸ್ಥಿತರಿದ್ದರು.ಉಪನ್ಯಾಸಕ ಇಬ್ರಾಹಿಂ ರವರು ಸುಳ್ಯ ಗಾಂಧಿನಗರ ನಿವಾಸಿ ಡಿ ಸಿಸಿ ಬ್ಯಾಂಕ್ ನಿವೃತ್ತ ಡಿಜಿಎಂ ಇಸ್ಮಾಯಿಲ್ ರವರ ಅಳಿಯ.













