ವಿವೇಕಾನಂದ ಕಾಲೇಜಿನಲ್ಲಿ ಯಕ್ಷದೀಕ್ಷಾ ಪ್ರದಾನ ಮತ್ತು ಯಕ್ಷಗೌರವ ಸಮರ್ಪಣೆ

0

ಪುತ್ತೂರು: ಯಕ್ಷಗಾನ ಕೇವಲ ಮನರಂಜನಾ ಕಲೆಯಲ್ಲ, ಅದು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಾಧ್ಯಮವಾಗಿದೆ. ಕರ್ನಾಟಕದಲ್ಲಿ ಕನ್ನಡವನ್ನು ಅತ್ಯಂತ ಶುದ್ಧವಾಗಿ ಪ್ರಕಟಪಡಿಸುವ ಕಾರ್ಯ ನಮ್ಮ ಕರಾವಳಿ ಭಾಗದಲ್ಲಿ ಯಕ್ಷಗಾನದಿಂದ ಆಗುತ್ತಿದೆ. ಒಬ್ಬ ಕಲಾವಿದನನ್ನು ಕೇಂದ್ರೀಕೃತ ಮಾಡುವುದೇ ಯಕ್ಷಗಾನದ ಕಲೆ ಎಂದುಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ಹಾಗೂ ಯಕ್ಷಗಾನ ಕಲಾವಿದ ನಾ. ಕಾರಂತ ಪೆರಾಜೆ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ನಡೆದ ಯಕ್ಷ ದೀಕ್ಷಾ ಪ್ರದಾನ ಮತ್ತು ಯಕ್ಷ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ ಜೀವನದಲ್ಲಿ ಶಿಸ್ತು ರೂಪುಗೊಳ್ಳುತ್ತದೆ ಮತ್ತು ಭವಿಷ್ಯದ ದಾರಿಯನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಹಿರಿಯರಿಂದ ಪ್ರಸಾದದ ರೂಪದಲ್ಲಿ ದೀಕ್ಷೆಯನ್ನು ಪಡೆದರೆ ಮುಂದೆ ಆ ಕ್ಷೇತ್ರದಲ್ಲಿ ಒಬ್ಬ ಉತ್ತಮ ಕಲಾವಿದನಾಗಿ ಬೆಳೆಯುವುದಕ್ಕೆ ಸಾಧ್ಯವಾಗುತ್ತದೆ. ಆದ್ದರಿಂದ ಯಕ್ಷಗಾನದ ಮೂಲಭೂತ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ .ಕೆ.ಎನ್ ಮಾತನಾಡಿ, ವಿವೇಕಾನಂದ ಕಾಲೇಜು ಯಕ್ಷಗಾನ, ಭರತನಾಟ್ಯ, ಸಂಗೀತ ಮುಂತಾದ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಸಮರ್ಥವಾದಂತಹ ಯಕ್ಷಗಾನ ಕಲೆಯನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವ ನಿಟ್ಟಿನಲ್ಲಿ ಅದನ್ನು ಉಳಿಸುತ್ತಾ, ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ಹಾಗೂ ಯಕ್ಷಗಾನ ಕಲಾವಿದ ನಾ.ಕಾರಂತ ಪೆರಾಜೆಯವರಿಗೆ ಯಕ್ಷಗೌರವ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.


ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್.ಎಸ್, ಕಾಲೇಜಿನ ವಿಶೇಷಾಧಿಕಾರಿ (ಆಡಳಿತ) ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ಎಮ್, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಡಾ. ವಿಜಯಸರಸ್ವತಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನುಯಕ್ಷ ರಂಜಿನಿಯ ಸಂಯೋಜಕ ಗೋವಿಂದರಾಜ್ ಶರ್ಮಾ ಸ್ವಾಗತಿಸಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸ್ಪೂರ್ತಿ.ಎಸ್ ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕ ಮಧುಕುಮಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here