ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

0

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ ಅ.26 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ. ಸಂದರ್ಶನವು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಮುಖ್ಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ವಿವರಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 96204 68869 ಅನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here