ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ

0

ನೆಲ್ಯಾಡಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟವಾದ ಮೀಫ್ (MEIF) ಸಂಸ್ಥೆಯ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೆಲ್ಯಾಡಿಯ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಧ್ಯಕ್ಷರಾದ ನಾಝಿಂ ಸಾಹೇಬ್ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚೆಗೆ ನಡೆದ ಮೀಫ್ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ನಾಝಿಂ ಸಾಹೇಬ್ ಅವರನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ನೆಲ್ಯಾಡಿ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಧ್ಯಕ್ಷರಾದ ನಾಝಿಂ ಸಾಹೇಬ್ ಅವರು ಮೀಫ್ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿರುವುದು ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಹಿತೈಷಿಗಳಲ್ಲಿ ಸಂತಸ ಮೂಡಿಸಿದೆ. ಅವರ ಆಯ್ಕೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಶೈಕ್ಷಣಿಕ ಸೇವೆಗೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here