ಬೆಳೆ ವಿಮೆ ಪರಿಹಾರ ಮೊತ್ತ ಪಾವತಿಗೆ ತೋಟಗಾರಿಕೆ ಇಲಾಖೆ ರಾಜ್ಯ ನಿರ್ದೇಶಕರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

0

ನೆಲ್ಯಾಡಿ: ಬೆಳೆವಿಮೆ ಪರಿಹಾರ ಮೊತ್ತ ಪಾವತಿಯಲ್ಲಿ ಆಗಿರುವ ವ್ಯತ್ಯಾಸದ ಬಗ್ಗೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರ ನಿಯೋಗ ತೋಟಗಾರಿಕಾ ಇಲಾಖೆ ರಾಜ್ಯ ನಿರ್ದೇಶಕರಾದ ಇಬ್ರಾಹಿಂ ಎಚ್.ಅವರನ್ನು ಅ.23ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.


ಮುಂದಿನ ದಿನದಲ್ಲಿ ಬಾಕಿ ಬೆಳೆವಿಮೆ ಪರಿಹಾರ ಮೊತ್ತ ಬಿಡುಗಡೆ ಮಾಡಲಾಗುವುದು ಎಂದು ತೋಟಗಾರಿಕಾ ಇಲಾಖೆ ನಿರ್ದೇಶಕರು ಶಾಸಕರ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ನಿರ್ದಿಷ್ಟ ದಿನದೊಳಗೆ ಬೆಳೆ ವಿಮೆ ಪರಿಹಾರ ಮೊತ್ತ ರೈತರ ಖಾತೆಗೆ ಜಮೆಯಾಗದೇ ಇದ್ದಲ್ಲಿ ಹೋರಾಟ ಮಾಡುವುದಾಗಿಯೂ ಶಾಸಕರು ತೋಟಗಾರಿಕಾ ಇಲಾಖೆ ರಾಜ್ಯ ನಿರ್ದೇಶಕರಿಗೆ ಮನವರಿಕೆ ಮಾಡಿದ್ದಾರೆ. ಶಾಸಕರ ತಂಡದಲ್ಲಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಇಬ್ರಾಹಿಂ ಎಮ್.ಕೆ., ನೆಲ್ಯಾಡಿ ಗ್ರಾ.ಪಂ.ಮಾಜಿ ಸದಸ್ಯ ರವಿಪ್ರಸಾದ್ ಶೆಟ್ಟಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಅನಿಲ, ದಿವ್ಯೇಶ್ ಗೌಡ ಕಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here