







ಪುತ್ತೂರು: ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನೆಲ್ಲಿಕಟ್ಟೆ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ತಶ್ರೀಫಾ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.


ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ ಕೆ.ಎಂ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಮೀಳಾ ಬಿ.ಕೆ ತರಬೇತಿ ನೀಡಿರುತ್ತಾರೆ. ಈಕೆ ಮುಂಡೂರು ಅಂಬಟ ನಿವಾಸಿ ಎಂ.ಐ ಅಬ್ದುಲ್ ಝಿಯಾದ್ ಮತ್ತು ಆತಿಕ ದಂಪತಿ ಪುತ್ರಿ.













