







ಪುತ್ತೂರು: ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿರುವ ರಕೇಶ್ವರಿ ಸಾನಿಧ್ಯವುಳ್ಳ ಹಿಂದೂಗಳ ಕೃಷಿ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿದ ಆದೇಶದ ವಿರುದ್ಧ ಹಿಂದೂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಅ.28ರಂದು ಬೆಳಗ್ಗೆ ಮುರುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ.


ಈ ಪ್ರತಿಭಟನೆಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













