







ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ಸಂಸ್ಥೆಯ ಆಡಳಿತ ಅಧಿಕಾರಿ ಆನಂದ ಎಸ್.ಟಿ.ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮುಂದೆ ದೀಪ ಬೆಳಗಿ, ಪುಷ್ಪಾರ್ಚನೆಗೈದರು. ಶಿಕ್ಷಕ ಕಿಶೋರ್ ಕುಮಾರ್ ಬಿ.ಅವರು ಮಹರ್ಷಿ ವಾಲ್ಮೀಕಿಯವರ ಜೀವನ, ತತ್ವಾದರ್ಶಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಗಾಯತ್ರಿ ಯು.ಎನ್., ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












