ಪುತ್ತೂರು ತಾ| ಮಟ್ಟದ 14, 17 ವಯೋಮಾನದ ಕ್ರೀಡೋತ್ಸವ-ಸಮಾರೋಪ

0

ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಹಯೋಗದಲ್ಲಿ ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ಎರಡು ದಿನ ನಡೆದ ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡೋತ್ಸವದ ಸಮಾರೋಪ ಸಮಾರಂಭ ಅ.24ರಂದು ಸಂಜೆ ನಡೆಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಂದರ್ಭೋಚಿತವಾಗಿ ಮಾತನಾಡಿದರು.


ಸಂತ ಫೀಲೋಮಿನಾ ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕ ವಂ|ಮ್ಯಾಕ್ಸಿಮ್ ಡಿಸೋಜಾ ಅದ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯ ಆರ್. ಕ್ಯಾಸ್ಟಲಿನೋ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಂ|ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಾಬು ಮರಿಕೆ, ಪ್ರಸನ್ನ ಪ್ರೆಸ್ ಮಾಲಕ ಗುರುರಾಜ್ ಹಾಗೂ ಜಿಲ್ಲಾ, ಪುತ್ತೂರು ಹಾಗೂ ಕಡಬ ತಾಲೂಕು ಪ್ರೌಢ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-1, ಗ್ರೇಡ್-2 ಸಂಘಗಳ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕ್ರೀಡಾ ಸಮವಸ್ತ್ರ ವಿತರಣೆ:
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪುತ್ತೂರು ತಾಲೂಕು ಪಂಚಾಯತ್ ವತಿಯಿಂದ ಕೊಡಮಾಡಿದ ಕ್ರೀಡಾ ಸಮವಸ್ತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ವಿತರಿಸಿದರು.

ಕ್ರೀಡಾಧ್ವಜ ಹಸ್ತಾಂತರ:
2027ರಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಅತಿಥ್ಯ ವಹಿಸಲಿರುವ ಸವಣೂರು ಸರಕಾರಿ ಪ್ರೌಢಶಾಲೆಗೆ ಕ್ರೀಡಾಧ್ವಜ ನೀಡಲಾಯಿತು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯ ಆರ್. ಕ್ಯಾಸ್ಟಲಿನೋರವರು ಸವಣೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್‌ರವರಿಗೆ ಕ್ರೀಡಾಧ್ವಜ ಹಸ್ತಾಂತರಿಸಿದರು.
ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ಸಹಶಿಕ್ಷಕ ಕ್ಲೆಮೆಂಟ್ ಪಿಂಟೋ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೋ ವಂದಿಸಿದರು. ಶಿಕ್ಷಕರು ಸಹಕರಿಸಿದರು.

ಕ್ರೀಡಾಕೂಟದ ಆಯೋಜಕರಿಗೆ ಸನ್ಮಾನ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಅತಿಥೇಯ ವಹಿಸಿ ಯಶಸ್ವಿಯಾಗಿ ನಡೆಸಿದ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಂ|ಮ್ಯಾಕ್ಸಿಮ್ ಡಿಸೋಜಾ, ದೈಹಿಕ ಶಿಕ್ಷಣ ಶಿಕ್ಷಕರುಗಳಾದ ನರೇಶ್ ಲೋಬೋ ಹಾಗೂ ಧನ್ಯರವರನ್ನು ವಿವಿಧ ಸಂಘಗಳ ವತಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here