ನಾಳೆ (ಅ.29) ವಿದ್ಯುತ್ ನಿಲುಗಡೆ

0

ಪುತ್ತೂರು: ವಿದ್ಯುತ್ ಮಾರ್ಗದ ಕಾರ‍್ಯ ಮತ್ತು ಪಾಲನೆ ಹಾಗೂ ಉಪಕೇಂದ್ರದ ದುರಸ್ತಿ ಕಾರ‍್ಯ ಹಮ್ಮಿಕೊಂಡಿರುವುದರಿಂದ ಅ.29 ರ ಪೂರ್ವಾಹ್ನ 10ರಿಂದ ಸಾಯಂಕಾಲ 05:30 ರವರೆಗೆ ಪುತ್ತೂರು- ಕಡಬ-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು, ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ ಫೀಡರ್ ಹಾಗೂ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‌ನಲ್ಲಿ ಅ.29 ರಂದು ಪೂರ್ವಾಹ್ನ 10ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಪೆರಿಯಡ್ಕ, ಗೋಕುಲನಗರ, ಕೆಮ್ಮಾರ, ಉಪ್ಪಿನಂಗಡಿ ಮತ್ತು ಬಜತ್ತೂರು ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here