






ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶ್ರೀ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿ ಪ್ರೀತಮ್ ಪುತ್ತೂರಾಯರು, ಅಡಳಿತ ಮಂಡಳಿಯ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.












