ಕಡಬ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ – ಸಂತ್ರಸ್ತೆಗೆ ರೂ. 9 ಲಕ್ಷ ಪರಿಹಾರ

0

ಪುತ್ತೂರು: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥ ಎಂದು ಪರಿಗಣಿಸಿದ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನೆಲ್ಯಾಡಿ ಗ್ರಾಮದ ಜಾಲುಮನೆ ರವಿ (ರವೀಂದ್ರ ಆಚಾರ್ಯ) 2018ರ ಅಕ್ಟೋಬರ್ 13ರಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ತೀರ್ಪು ಪ್ರಕಟಿಸಿದ್ದಾರೆ.

ಶಿಕ್ಷೆಯ ವಿವರ
ಬೆದರಿಕೆ ಆರೋಪ (ಭಾ.ದಂ.ಸಂ 506): 1 ವರ್ಷ ಜೈಲು ಮತ್ತು ರೂ. 25,000 ದಂಡ ಪೋಕ್ಸೋ ಕಾಯ್ದೆ 5(ಎಲ್) ರೆ/ವಿ 6: 20 ವರ್ಷ ಕಠಿಣ ಕಾರಾಗೃಹ ಮತ್ತು ರೂ. 25,000 ದಂಡ. ದಂಡ ಕಟ್ಟಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಶಿಕ್ಷೆ ನೀಡಿ ಪ್ರಕಟಿಸಿದೆ.

ಸಂತ್ರಸ್ತೆಗೆ ರೂ. 9 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. ಪ್ರಕರಣದಲ್ಲಿ ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕೆ ಮತ್ತು ಕಡಬ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ ತನಿಖೆ ನಡೆಸಿದ್ದರು. ಒಟ್ಟು 25 ಸಾಕ್ಷಿಗಳ ವಿಚಾರಣೆ ನಡೆದಿತ್ತು. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.

LEAVE A REPLY

Please enter your comment!
Please enter your name here