ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮಿತೇಶ್ ನಾಯ್ಕ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾದ ಮಿತೇಶ್ ನಾಯ್ಕ್ ಅವರು ಪುತ್ತೂರು ತಾಲೂಕು ಮಟ್ಟದಲ್ಲಿ ನಡೆದ 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಬಳ್ಳಕ್ಕ ಮನೆಯ ಜಗದೀಶ್ ನಾಯ್ಕ್ ಮತ್ತು ಸರೋಜಿನಿ ದಂಪತಿಗಳ ಪುತ್ರರಾಗಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಮತ್ತು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here