Breaking News

ಅಕ್ರಮ ಮದ್ಯ ಸಾಗಾಟ ಆರೋಪಿಗಳಾದ ಮಹ್ಮದ್,ಚಂದ್ರಶೇಖರ್ ದೋಷಮುಕ್ತ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಾರೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳಿಬ್ಬರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

19-1-2009ರಲ್ಲಿ ಕಡಬ ಠಾಣಾ ವ್ಯಾಪ್ತಿಯ ಕುದ್ಮಾರು ಗ್ರಾಮದ ಬರೆಪ್ಪಾಡಿಯಲ್ಲಿ ಎಎಸ್‌ಐ ಈಶ್ವರ ನಾಯ್ಕ ಹಾಗೂ ಸಿಬಂದಿಗಳು ರಸ್ತೆ ಗಸ್ತು ನಿರತರಾಗಿದ್ದ ಸಂದರ್ಭದಲ್ಲಿ ಕಾರೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿತ್ತು.ಮದ್ಯ ಸಮೇತ ಕಾರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಕಾರು ಚಾಲಕ ಮಹ್ಮದ್ ಮತ್ತು ಕಾರಿಗೆ ಬೆಂಗಾವಲಾಗಿ ಹೋಗುತ್ತಿದ್ದ ಬೈಕ್ ಸವಾರ ಚಂದ್ರಶೇಖರ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.ಆರೋಪಿಗಳ ಪರ ವಕೀಲರಾದ ಮಹೇಶ್ ಕಜೆ, ಕಿಶೋರ್ ಕೊಳತ್ತಾಯ, ಪ್ರಸಾದ್ ಕುಮಾರ್ ರೈ ವಾದಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.