ಕಾಣಿಯೂರು ಬಿಜೆಪಿ ಕಾರ್ಯಕರ್ತರ ಸಭೆ – ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭ

Puttur_Advt_NewsUnder_1
Puttur_Advt_NewsUnder_1

kaniyoor bjp photoಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಘನತೆಯನ್ನು ಹೆಚ್ಚಿಸಿದೆ- ಎಸ್ ಅಂಗಾರ

 ಚಿತ್ರ: ಸುಧಾಕರ್ ಕಾಣಿಯೂರು

ಕಾಣಿಯೂರು: ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಾಡಿದಂತಹ ಕೆಲಸ ಕಾರ್ಯಗಳು ನಮ್ಮ ದೇಶದ ಘನತೆಯನ್ನು ಹೆಚ್ಚಿಸಿದೆ. ಭಾರತವು ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿದೆ. ಈ ವಿಚಾರಗಳನ್ನು ಜನ ಸಾಮಾನ್ಯರಿಗೆ ತಿಳಿಸಬೇಕು, ಜೊತೆಗೆ ಮುಂದೆ ನಡೆಯುವಂತಹ ಚುನಾವಣೆಗೆ ಬಿಜೆಪಿ ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತದೆಯೂ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡಬೇಕೆಂದು ಸುಳ್ಯ ಶಾಸಕ ಎಸ್ ಅಂಗಾರರವರು ಹೇಳಿದರು. ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ಜಿ.ಪಂ, ತಾ.ಪಂ ಚುನಾವಣೆ ಹಿನ್ನಲೆಯಲ್ಲಿ ಚಾರ್ವಾಕ ತಾ.ಪಂ ಕ್ಷೇತ್ರ ಮತ್ತು ಬೆಳಂದೂರು ಜಿ.ಪಂ ಕ್ಷೇತ್ರ ವ್ಯಾಪ್ತಿಯ ಕಾಣಿಯೂರು, ಚಾರ್ವಾಕ, ದೋಳ್ಪಾಡಿ, ಕುದ್ಮಾರು, ಕಾಯಿಮಣ ಗ್ರಾಮದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಮತ್ತು ಅಭ್ಯರ್ಥಿಗಳ ಆಯ್ಕೆ ಪಕ್ರಿಯೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯ ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಜನಾರ್ದನ, ಜಿ.ಪಂ ಸದಸ್ಯ ಪುಷ್ಪಾವತಿ ಕಳುವಾಜೆ, ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಸದಸ್ಯ ಧರ್ಮೇಂದ್ರ ಗೌಡ ಕಟ್ಟತ್ತಾರು, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಚಂದ್ರ ಕೋಲ್ಚಾರು, ಕಾಣಿಯೂರು ಗ್ರಾ.ಪಂ ಅಧ್ಯಕ್ಷೆ ಸೀತಮ್ಮ ಖಂಡಿಗ, ಬೆಳಂದೂರು ಗ್ರಾ.ಪಂ ಅಧ್ಯಕ್ಷೆ ಉಮೇಶ್ವರಿ ಅಗಳಿ, ಚಾರ್ವಾಕ ಸಿ.ಎ ಬ್ಯಾಂಕ್ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಸವಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಚೆನ್ನಪ್ಪ ಗೌಡ, ಕಾಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಬೆಳಂದೂರು ಗ್ರಾ.ಪಂ ಉಪಾಧ್ಯಕ್ಷ ಹರೀಶ್ ಕೆರೆನಾರು, ಚಾರ್ವಾಕ ಸಿ.ಎ ಬ್ಯಾಂಕ್ ನಿರ್ದೇಶಕರುಗಳಾದ ರಾಮಣ್ಣ ಗೌಡ ನಾವೂರು, ದೇವಿಪ್ರಸಾದ್ ದೋಳ್ಪಾಡಿ, ಹರೀಶ್ ಅಂಬುಲ, ಕಾಣಿಯೂರು ಗ್ರಾ.ಪಂ ವ್ಯಾಪ್ತಿಯ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾರ್ಯದರ್ಶಿ ಶಿವರಾಮ ರೈ ಪಿಜಕ್ಕಳ,  ಚಾರ್ವಾಕ ಹಾ.ಉ.ಸ.ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ ಸದಸ್ಯರುಗಳಾದ ಸುರೇಶ್ ಓಡಬಾಯಿ, ರಾಮಣ್ಣ ಗೌಡ ಮುಗರಂಜ, ಪದ್ಮನಾಭ ಅಂಬುಲ, ಮಾಧವಿ ಕೋಡಂದೂರು, ವೀರಪ್ಪ ಗೌಡ ಉದ್ಲಡ್ಡರವರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.  ಸುಳ್ಯ ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಪ್ರಸ್ತಾವನೆಗೈದರು. ಕಾಣಿಯೂರು ಗ್ರಾ.ಪಂ ಸದಸ್ಯ ಗಣೇಶ್ ಉದನಡ್ಕ ಸ್ವಾಗತಿಸಿ, ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.