Breaking News

ಬರೆಪ್ಪಾಡಿಯಲ್ಲಿ ಜಾನುವಾರು ಜಂತುಹುಳ ನಿವಾರಣಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

milkಪುತ್ತೂರು : ದ.ಕ. ಹಾಲು ಉತ್ಪಾದಕರ ಸಹಕಾರಿ ಸಂಘಗಳ ಆಶ್ರಯದಲ್ಲಿ ಸಾಮೂಹಿಕವಾಗಿ ಜಾನುವಾರುಗಳಿಗೆ ಜಂತುಹುಳ ನಿವಾರಣಾ ಕಾರ್ಯಕ್ರಮ ಕುದ್ಮಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆವರಣದಲ್ಲಿ ಜ.5ರಂದು ನಡೆಯಿತು. ದ.ಕ. ಹಾಲು ಒಕ್ಕೂಟದ ನಿರ್ದೇಶಕ ಕೆ.ಸೀತಾರಾಮ ರೈ ಸವಣೂರುರವರು ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿ, ಹಾಲು ಒಕ್ಕೂಟದ ಸದಸ್ಯರಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಒಕ್ಕೂಟದ ವತಿಯಿಂದ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದರು.

ದ.ಕ. ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ| ರಾಮಕೃಷ್ಣ ಭಟ್‌ರವರು ಮಾತನಾಡಿ, ಜಂತುಹುಳದಿಂದಾಗಿ ಜಾನುವಾರುಗಳಿಗೆ ಉಂಟಾಗುವ ಕಾಯಿಲೆ ಹಾಗೂ ಜಂತುಹುಳ ನಿವಾರಣಾ ಮಾತ್ರೆಯನ್ನು ಸಾಮೂಹಿಕವಾಗಿ ನೀಡುವ ಮಹತ್ವದ ಕುರಿತು ಮಾಹಿತಿ ನೀಡಿದರು.

ಕುದ್ಮಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶಶಿಕಲಾ ವಜ್ರಗಿರಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕರು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯದರ್ಶಿ ಶೇಷಮ್ಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.