ಪುಣಚ: ಕಾಂಗ್ರೆಸ್ ಕಾರ್ಯಕರ್ತರ ಸಭೆ ಪಕ್ಷದ ಬೆಂಬಲದೊಂದಿಗೆ ಬಂದ ಅಭ್ಯರ್ಥಿಯೇ ಅಧಿಕೃತ-ಶಕುಂತಳಾ ಶೆಟ್ಟಿ

4ವಿಟ್ಲ: ಪಕ್ಷದ ಬೆಂಬಲದೊಂದಿಗೆ ಬಂದ ಅಭ್ಯರ್ಥಿಯೇ ಅಧಿಕೃತ ಅಭ್ಯರ್ಥಿ. ಬಂಡಾಯ ಅಭ್ಯರ್ಥಿಗಳು ಠೇವಣಿಯೊಂದಿಗೆ ತಮ್ಮ ವರ್ಚಸ್ಸನ್ನೂ ಕಳೆದುಕೊಳ್ಳಲಿದ್ದಾರೆ ಎಂದು ಸಂಸದೀಯ ಕಾರ್ಯದರ್ಶಿ ಶಾಸಕಿ ಟಿ.ಶಕುಂತಳಾ ಶೆಟ್ಟಿ ತಿಳಿಸಿದರು.
ಅವರು ಪುಣಚ ಗರಡಿ ಅಂಬೇಡ್ಕರ್ ಭವನದ ವಠಾರದಲ್ಲಿ ಜ.5ರಂದು  ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಳಿಕ ವಿಧಾನ ಪರಿಷತ್ ಚುನಾವಣಾ ಕಣದಲ್ಲಿದ್ದಂತೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿಯೂ ಪಕ್ಷದೊಳಗೆ ಬಂಡಾಯದ ಹೊಗೆಯಾಡುತ್ತಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಬಂಡಾಯ ಅಭ್ಯರ್ಥಿಗಳಿಗೆ ವಿಧಾನ ಪರಿಷತ್ ಚುನಾವಣೆಯೇ ಉತ್ತರ ನೀಡಿದೆ. ಪಕ್ಷೇತರನಾಗಿ ಚುನಾವಣೆ ಎದುರಿಸುವವರಿಗೆ ನಾವೇನು ಮಾಡಲಾಗದು. ಆದರೆ ನಾವೆಲ್ಲರೂ ಪಕ್ಷ ಟಿಕೆಟ್ ನೀಡಿದ ಅಧಿಕೃತ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ. ಅದಕ್ಕಾಗಿ ಪ್ರಯತ್ನಿಸುತ್ತೇವೆ ಎಂದು ರಾಜ್ಯ ಸರಕಾರ ಜನರಿಗೆ ನೀಡಿದ ವಚನವನ್ನು ಹಲವಾರು ಕಾರ್ಯಕ್ರಮಗಳ ಅನುಷ್ಠಾನಗೊಳಿಸಿದೆ. ಇದನ್ನೇ ಮುಂದಿಟ್ಟುಕೊಂಡು ಕಾರ್ಯಕರ್ತರು ಜನರಲ್ಲಿ ಮತ ಕೇಳಲಿದ್ದಾರೆ ಎಂದ ಅವರು ಬಿಜೆಪಿ ಕಾಂಗ್ರೆಸ್ ರಾಜ್ಯದಲ್ಲಿ ಮಾಡಿದ ಸಾಧನೆಗಳನ್ನು ತಾವು ಮಾಡಿದ್ದೆಂದು ಹೇಳುತ್ತಾ ಬರುತ್ತಿದ್ದಾರೆ. ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂಪೂರ್ಣ ಹದಗೆಟ್ಟಿರುವ ಬದನಾಜೆ-ಕುಂಡ್ಕಡ್ಕ-ಪರಿಯಾಲ್ತಡ್ಕ ಜಿಲ್ಲಾ ಪಂಚಾಯಿತಿ ರಸ್ತೆಯನ್ನು ಒಂದು ಅವಧಿಯ ಅನುದಾನದ ಮೂಲಕ ಅಭಿವೃದ್ಧಿ ಪಡಿಸಲಾಗುವುದು, ಪುತ್ತೂರು-ಪುಣಚ ಸರಕಾರಿ ಬಸ್ಸು ಸಂಚಾರಕ್ಕೆ ಪರವಾನಿಗೆ ಸಿಕ್ಕಿದ್ದು, ಶೀಘ್ರವಾಗಿ ಸಂಚಾರಕ್ಕೆ ಅನುವು ಮಾಡಿ ಕೊಡಲಾಗುವುದು ಎಂದು ತಿಳಿಸಿದರು.
ಪುಣಚ ಗ್ರಾಮ ಪಂಚಾಯಿತಿ ಪಿಡಿಒ, ಮೆಸ್ಕಾಂ ಲೈನ್‌ಮ್ಯಾನ್, ಗ್ರಾಮಕರಣಿಕರ ಕಚೇರಿಯ ಸಹಾಯಕರನ್ನು ವರ್ಗಾವಣೆಗೊಳಿಸುವಂತೆ ಒತ್ತಾಯಿಸಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕರ್ತರ ಹಲವಾರು ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪುತ್ತೂರು-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣಚಂದ್ರ ಆಳ್ವ, ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ ಶ್ರೀಧರ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಕಾರ್ಯಕಾರಿ ಸಮಿತಿ ಸದಸ್ಯ ರಮಾನಾಥ ವಿಟ್ಲ, ಪುತ್ತೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಅರ್ಷದ್ ದರ್ಬೆ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.