ಸವಣೂರು : ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಉದ್ಘಾಟನೆ – ಗ್ರಾಮಾಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯ: ಆಶಾ ತಿಮ್ಮಪ್ಪ

Puttur_Advt_NewsUnder_1
Puttur_Advt_NewsUnder_1

0107pld 3a  phಪಾಲ್ತಾಡಿ : ಗ್ರಾಮೀಣ ಭಾಗದ ಜನತೆಯ ಮೂಲಭೂತ ಅವಶ್ಯಕತೆಗಳು ಈಡೇರಿದಾಗ ಗಾಂಧಿ ಕಂಡ ರಾಮ ರಾಜ್ಯದ ಕನಸು ನನಸಾಗಲು ಸಾಧ್ಯ ಎಂದು ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ  ಹೇಳಿದರು.

ಅವರು ಸುಳ್ಯ ಶಾಸಕ ಎಸ್.ಅಂಗಾರ ಅವರ ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಮಂಜುನಾಥನಗರ ಬಂಬಿಲ ಮಹಾದೇವಿ ದೇವಸ್ಥಾನದ ಸಂಪರ್ಕ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಯನ್ನು ಜ.7 ರಂದು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಪುಷ್ಪಾವತಿ ಗೌಡ ಕಳುವಾಜೆ, ತಾ.ಪಂ.ಅಧ್ಯಕ್ಷೆ ಪುಲಸ್ತ್ಯಾ ರೈ, ಉಪಾಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ., ಉಪಾಧ್ಯಕ್ಷ ರವಿಕುಮಾರ್, ಸದಸ್ಯ ಸತೀಶ್ ಅಂಗಡಿಮೂಲೆ, ಪ್ರಕಾಶ್ ಕುದ್ಮನಮಜಲು, ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಸವಣೂರು ಹಿಂ.ಜಾ.ವೇ.ಅಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು, ವಿವೇಕಾನಮದ ಯುವಕ ಮಂಡಲದ ಅಧ್ಯಕ್ಷ ಅನ್ನಪೂರ್ಣಪ್ರಸಾದ್ ರೈ ಬೈಲಾಡಿ, ವಿಠಲ ಶೆಟ್ಟಿ ಉಪಸ್ಥಿತರಿದ್ದರು.

ಪಾಲ್ತಾಡಿ ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.