ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಯು.ಲೋಕೇಶ್ ಹೆಗ್ಡೆ ನೇಮಕ

Puttur_Advt_NewsUnder_1
Puttur_Advt_NewsUnder_1

lokesh hegdeಪುತ್ತೂರು :ಪುರಸಭಾ ಮಾಜಿ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆರವರು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಬ್ಲಾಕ್ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ಮನವಿಯಂತೆ,ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ, ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ರವರ ಶಿಫಾರಸಿನಂತೆ ರಾಜ್ಯ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಶ್ರೀಪ್ರಕಾಶಂ ರವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗೆ ನಗರಾಭಿವೃದ್ದಿ ಸಚಿವ ವಿನಯಕುಮಾರ್ ಸೊರಕೆ, ಆರೋಗ್ಯ ಸಚಿವ ಯು.ಟಿ. ಖಾದರ್, ಮೀನುಗಾರಿಕೆ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್‌ರವರು ಸಹಕರಿಸಿದ್ದಾರೆ.

ಯು. ಲೋಕೇಶ್ ಹೆಗ್ಡೆ ರವರು ಬ್ಲಾಕ್ ಕಾಂಗ್ರೇಸ್ ಹಿರಿಯ ಉಪಾಧ್ಯಕ್ಷರಾಗಿ, ಕರ್ನಾಟಕ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾಗಿ, ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಗೌರವ ಸಲಹೆಗಾರರಾಗಿ, ಪುತ್ತೂರು ಲಾರಿ ಚಾಲಕರ ಸಂಘದ ಗೌರವಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.