ಜ.11 : ಕಡಬದಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

Puttur_Advt_NewsUnder_1
Puttur_Advt_NewsUnder_1

ಕಡಬ: ಜ.26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಎಲ್ಲಾ ಇಲಾಖೆ, ಸಂಘ ಸಂಸ್ಥೆ ಶಾಲಾ ಕಾಲೇಜುಗಳ ನೇತೃತ್ವದಲ್ಲಿ ಆಚರಿಸುವ ಬಗ್ಗೆ ಸಮಾಲೋಚನಾ ಸಭೆಯನ್ನು ಜ.11 ರಂದು ಕಡಬ ತಹಶೀಲ್ದಾರ್ ಕಚೇರಿಯಲ್ಲಿ ಕರೆಯಲಾಗಿದೆ ಎಂದು ತಹಶೀಲ್ದಾರರಾದ ಬಿ.ಲಿಂಗಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಸರಕಾರಿ ಕಾರ‍್ಯಕ್ರಮಗಳನ್ನು ವಿಶೇಷ ರೀತಿಯಲ್ಲಿ ಆಚರಿಸುವ ಸಲುವಾಗಿ ಈಗಾಗಲೇ ಪ್ರತಿಯೊಂದು ಕಾರ‍್ಯಕ್ರಮಗಳನ್ನು ಎಲ್ಲರ ಕೂಡುವಿಕೆಯಿಂದ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು ಈ ಬಾರಿ ಜ.26ರ ಗಣರಾಜ್ಯೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವಂತೆ ತೀರ್ಮಾನಿಸಲಾಗಿದ್ದು ಎಲ್ಲರು ಸಹಕರಿಸಬೇಕೆಂದು ತಿಳಿಸಿದ ತಹಶೀಲ್ದಾರರು ಪೂರ್ವಭಾವಿ ಸಭೆಯಲ್ಲಿ ಕಡಬ ಮೆಸ್ಕಾಂ ಇಲಾಖಾ  ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು, ಪಶು ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿಗಳು, ಆರಕ್ಷಕ ಉಪನಿರೀಕ್ಷಕರು, ದೂರವಾಣಿ ಸಂಪರ್ಕ ಜ್ಯೂನಿಯರ್ ಇಂಜಿನಿಯರ್, ಸಹಾಯಕ ಕೃಷಿ ಅಧಿಕಾರಿ, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಏಮ್ಸ್ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು, ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಸಂಚಾಲಕರು, ಪ್ರಾಂಶುಪಾಲರು, ಮುಖ್ಯಗುರುಗಳು, ಸೈಂಟ್ ಆನ್ಸ್ ಶಾಲಾ ಮುಖ್ಯಗುರುಗಳು, ಸರಸ್ವತಿ ವಿದ್ಯಾಲಯದ ಸಂಚಾಲಕರು, ಅಧ್ಯಕ್ಷರು, ಪದಾಧಿಕಾರಿಗಳು, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಸಂಚಾಲಕರು, ಮುಖ್ಯೋಪಧ್ಯಾಯರು, ಮಾದರಿ ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರು,  ಸಹಕಾರಿ ಸಂಘದ  ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಕಾರ‍್ಯನಿರ್ವಹಣಾಧಿಕಾರಿ, ಅಧ್ಯಕ್ಷರು, ಪದಾಧಿಕಾರಿಗಳು ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಜೇಸಿಸ್  ಕಡಬ, ಆಟೋ ಚಾಲಕ ಮಾಲಕರ ಸಂಘ, ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಭಾಗವಹಿಸುವಂತೆ ತಿಳಿಸಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.