ಪುತ್ತೂರು : ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

DSCN0uuu3ಪುತ್ತೂರು ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಹಸಂಸ್ಥೆ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದರ್ಬೆ ವಿನಾಯಕನಗರ ಸಚ್ಚಿದಾನಂದ ಸೇವಾ ಸದನದಲ್ಲಿ ಸಮಯ ನಿರ್ವಹಣೆ ಮತ್ತು ಪರೀಕ್ಷಾ ಪೂರ್ವಸಿದ್ಧತೆ ಹಾಗೂ ವೃತ್ತಿ ಕೌಶಲ್ಯ ಮಾರ್ಗದರ್ಶನದ ಬಗ್ಗೆ ಜ.10 ರಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಅನಂತಕೃಷ್ಣ ನಾಯಕ್  ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪಾಂಶುಪಾಲ ಸೀತಾರಾಮ ಕೇವಳರವರು ‘ಸಮಯ ನಿರ್ವಹಣೆ ಮತ್ತು ಪರೀಕ್ಷಾ ಪೂರ್ವ ಸಿದ್ಧತೆ’ ಬಗ್ಗೆ ಮಾಹಿತಿ ನೀಡಿದರು. ಅಪರಾಹ್ನದ ನಂತರ ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣರವರು ‘ವೃತ್ತಿ ಕೌಶಲ್ಯ ಮಾರ್ಗದರ್ಶನ’ ಕುರಿತು ಮಾಹಿತಿ ನೀಡಿದರು. ಟ್ರಸ್ಟ್‌ನ ಕಾರ್ಯದರ್ಶಿ ವಸಂತ ಎ. ಪ್ರಸ್ತಾವನೆಗೈದರು. ವಿದ್ಯಾರ್ಥಿ ಸುಕನ್ಯಾ ಪ್ರಾರ್ಥಿಸಿ, ಸುಚಿತ್ರಾರವರು ಕಾರ್ಯಕ್ರಮ ನಿರ್ವಹಿಸಿದರು. ಸತ್ಯನಾರಾಯಣ.ಟಿ ಸ್ವಾಗತಿಸಿ, ಮನೋಜ್‌ರವರು ವಂದಿಸಿದರು. ಸುಮಾರು 30ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.