ರಾಮಕುಂಜ ಪ.ಪೂ., ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಪದವಿ ಕಾಲೇಜಿನಲ್ಲಿ ಮುಂದಿನ ವರ್ಷದಿಂದ ಬಿ.ಎಸ್ಸಿ. ಪ್ರಾರಂಭ: ಪೇಜಾವರ ಸ್ವಾಮೀಜಿ

Puttur_Advt_NewsUnder_1
Puttur_Advt_NewsUnder_1

5ಪುತ್ತೂರು: ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ 2015-16ನೇ ಸಾಲಿನ ವಾರ್ಷಿಕೋತ್ಸವ ಜ.11ರಂದು ನಡೆಯಿತು.
ಸಂಜೆ ನಡೆದ ಸಭಾ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದ ಸಂಸ್ಥೆಯ ಗೌರವಾಧ್ಯಕ್ಷರೂ ಆದ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ಈಗಾಗಲೇ ಬಿ.ಎ., ಬಿ.ಕಾಂ., ಹಾಗೂ ಬಿ.ಬಿ.ಎಂ.ವಿಭಾಗಗಳಿವೆ. ಮುಂದಿನ ಶೈಕ್ಷಣಿಕ ವರ್ಷದಿಂದ ಬಿ.ಎಸ್ಸಿ ವಿಭಾಗವೂ ಪ್ರಾರಂಭಗೊಳ್ಳಲಿದೆ. ಈ ಮೂಲಕ ಸಂಸ್ಥೆ ಇನ್ನೊಂದು ಹೆಜ್ಜೆ ಇಟ್ಟಿದ್ದು ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ನುಡಿದರು. ಶಿಕ್ಷಣ ವ್ಯವಸ್ಥೆಯಲ್ಲಿ ಅಧ್ಯಾಪಕ ಹಾಗೂ ಪೋಷಕರದ್ದು ದ್ವಿಪಾತ್ರ. ಪೋಷಕರು ಅಧ್ಯಾಪಕರಾಗಿಯೂ, ಅಧ್ಯಾಪಕರು ಪೋಷಕರಾಗಿಯೂ ಕರ್ತವ್ಯ ನಿರ್ವಹಿಸಿದಲ್ಲಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಹೇಳಿದರು.
ಉಡುಪಿ ಪೇಜಾವರ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಅತಿಥಿ ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೆಟ್ಟ ಈಶ್ವರ ಭಟ್ ಮಾತನಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಅವಧಿಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರಯುತ ಶಿಕ್ಷಣ ಸಿಗಬೇಕು. ಇದರಿಂದ ಮುಂದೆ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದರು. ಸಿಸ್ಕೋ ಕಂಪನಿಯ ಸಾಫ್ಟ್‌ವೇರ್ ಇಂಜಿನಿಯರ್ ಖನಿಜ್ ಕುಮಾರ್, ಕು.ಸುಮಯಾ ಸುಲ್ತಾನರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.
ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಕಾರ‍್ಯಕ್ರಮದಲ್ಲಿ ಗೌರವಿಸಲಾಯಿತು. ಈ ಕಾರ‍್ಯಕ್ರಮವನ್ನು ಉಪನ್ಯಾಸಕ ದೇವಿಪ್ರಸಾದ್ ಹಾಗೂ ಶಿಕ್ಷಕಿ ಪುಷ್ಪಾವತಿ ನಿರೂಪಿಸಿದರು. ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷ ಕೃಷ್ಣಮೂರ್ತಿ ಇ ಕಲ್ಲೇರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಸತೀಶ್ ಭಟ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಭಟ್, ಕಾಲೇಜು ವಿಭಾಗದ ನಾಯಕ ಅರ್ಜುನ್, ಪ್ರೌಢಶಾಲಾ ವಿಭಾಗದ ನಾಯಕ ಪವನ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ‍್ಯದರ್ಶಿ ರಾಧಾಕೃಷ್ಣ ಕೆ.ಎಸ್.ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಭಟ್ ವಂದಿಸಿದರು.ಉಪನ್ಯಾಸಕ ಹರಿನಾರಾಯಣ ಆಚಾರ್ ಕಾರ‍್ಯಕ್ರಮ ನಿರೂಪಿಸಿದರು. ಅಖಿಲಾ ಮತ್ತು ಅಖಿಲಾ ಕೆ. ಪ್ರಾರ್ಥಿಸಿದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ‍್ಯಕ್ರಮ ನಡೆಯಿತು.

ಸಂವಾದಕ್ಕೆ ಅವಕಾಶ:ಪರ್ಯಾಯ ಪೀಠವೇರಲಿರುವುದರಿಂದ ಮುಂದಿನ ಎರಡು ವರ್ಷಗಳ ಕಾಲ ಹುಟ್ಟೂರಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಇಲ್ಲಿನ ಶಿಕ್ಷಕರು, ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಇಟ್ಟುಕೊಂಡು ಬರಬೇಕು. ಈ ವೇಳೆ ಸಂವಾದಕ್ಕೆ ಅವಕಾಶ ನೀಡುತ್ತೇನೆ. ಇಷ್ಟರ ತನಕ ಸಂವಾದಕ್ಕೆ ಅವಕಾಶವಿರಲಿಲ್ಲ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು, ಶಿಕ್ಷಕರೊಂದಿಗೆ ಸಂವಾದಕ್ಕೆ ಅವಕಾಶ ಕಲ್ಪಿಸುವುದಾಗಿ ಪೇಜಾವರ ಸ್ವಾಮೀಜಿ ಹೇಳಿದರು. ಇಲ್ಲಿನ ವಿದ್ಯಾಸಂಸ್ಥೆ ಉತ್ತಮ ಫಲಿತಾಂಶ ದಾಖಲಿಸುತ್ತಿದೆ. ಮುಂದಿನ ಎರಡು ವರ್ಷ ಉಡುಪಿಯಲ್ಲೇ ಇದ್ದುಕೊಂಡು ವಿದ್ಯಾರ್ಥಿಗಳ ಉತ್ತಮ ಫಲಿತಾಂಶ ನಿರೀಕ್ಷಿಸುತ್ತೇನೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಯತ್ನಿಸಬೇಕೆಂದು ಪೇಜಾವರ ಸ್ವಾಮೀಜಿ ಹೇಳಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.