ದರ್ಬೆ: ಶ್ರೀ ಸರಸ್ವತಿ ಕ್ರೆಡಿಟ್‌ನಿಂದ ಉಪನ್ಯಾಸ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

9ಪುತ್ತೂರು: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಹಸಂಸ್ಥೆ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದರ್ಬೆ ವಿನಾಯಕನಗರ ಸಚ್ಚಿದಾನಂದ ಸೇವಾ ಸದನದಲ್ಲಿ `ಸಮಯ ನಿರ್ವಹಣೆ ಮತ್ತು ಪರೀಕ್ಷಾ ಪೂರ್ವಸಿದ್ಧತೆ’ ಹಾಗೂ `ವೃತ್ತಿ ಕೌಶಲ್ಯ ಮಾರ್ಗದರ್ಶನದ’ ಬಗ್ಗೆ ಜ. 10ರಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಅನಂತಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪಾಂಶುಪಾಲ ಸೀತಾರಾಮ ಕೇವಳರವರು ‘ಸಮಯ ನಿರ್ವಹಣೆ ಮತ್ತು ಪರೀಕ್ಷಾ ಪೂರ್ವ ಸಿದ್ಧತೆ’ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣರವರು ‘ವೃತ್ತಿ ಕೌಶಲ್ಯ ಮಾರ್ಗದರ್ಶನ’ ಕುರಿತು ಮಾಹಿತಿ ನೀಡಿದರು ಟ್ರಸ್ಟ್‌ನ ಕಾರ್ಯದರ್ಶಿ ವಸಂತ ಎ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಕನ್ಯಾ ಪ್ರಾರ್ಥಿಸಿ, ಸುಚಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ಸತ್ಯನಾರಾಯಣ ಟಿ ಸ್ವಾಗತಿಸಿ, ಮನೋಜ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.