ಕಂಬಳಬೆಟ್ಟು-ಜೀಪು ಬೈಕ್ ಡಿಕ್ಕಿ-ಸವಾರ ಗಂಭೀರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

kambalabettu

ವಿಟ್ಲ: ಜೀಪು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಜಂಕ್ಷನ್‌ನಲ್ಲಿ ನಡೆದಿದೆ.

ಕೇಪು ಗ್ರಾಮದ ಅಡ್ಯನಡ್ಕ ನಿವಾಸಿ ರೂಪೇಶ್(28) ಗಾಯಗೊಂಡ ಬೈಕ್ ಸವಾರರಾಗಿದ್ದಾರೆ. ಇವರು ಬೆಳಿಗ್ಗೆ ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಜಂಕ್ಷನ್‌ನಲ್ಲಿ ಪುತ್ತೂರು ಕಡೆಯಿಂದ ಬಂದ ಜೀಪು ಡಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ಸವಾರ ರಸ್ತೆಗೆಸೆಯಲ್ಪಟ್ಟು ಕಾಲಿಗೆ ಹಾಗೂ ಕೈಗೆ ತೀವ್ರ ಸ್ವರೂಪದ ಗಾಯವಾಗಿದೆ. ಬಳಿಕ ಅವರನ್ನು 108 ಆಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಸ್ಪತ್ರೆಗೆ ಕೊಂಡೊಯ್ಯಲು ಹಿಂದೇಟು ಹಾಕಿದ ಚಾಲಕರು:

ಗಾಯಾಳು ಗಂಭೀರ ಗಾಯಗೊಂಡು ರಸ್ತೆಯಲ್ಲಿ ಹೊರಳಾಡುತ್ತಿದ್ದರೂ ಸ್ಥಳೀಯರು ಅವರನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲು ಮುಂದಾದಾಗ ಕೆಲವು ಆಟೋ ಚಾಲಕರು ನಾವು ಪುತ್ತೂರಿಗೆ ಹೋಗಲ್ಲ. ಕೆ.ಎ.೧೯ ಸಂಖ್ಯೆಯ ನಮ್ಮ ಆಟೋಗಳಿಗೆ ಅಲ್ಲಿಯ ಪೊಲೀಸರು ಬೇಕಾಬಿಟ್ಟಿ ದಂಡ ಹಾಕುತ್ತಾರೆ ಎಂದು ಹೆದರಿ ಗಾಯಾಳುವನ್ನು ಕೊಂಡೊಯ್ಯಲು ಹಿಂದೇಟು ಹಾಕಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು. ಅರ್ಧ ಗಂಟೆಯ ಬಳಿಕ ೧೦೮ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ವಿಟ್ಲ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಪುತ್ತೂರು ಆಸ್ಪತ್ರೆ ಅನಿವಾರ್ಯವಾಗಿದ್ದು, ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಕೊಂಡೊಯ್ಯುತ್ತಿರುವ ವೇಳೆ ಅಲ್ಲಿಯ ಪೊಲೀಸರು ಅರ್ಧ ದಾರಿಯಲ್ಲಿ ಕೆ.ಎ.19 ನೋಂದಣಿಯ ರಿಕ್ಷಾಗಳನ್ನು ತಡೆ ಹಿಡಿದು ನಿರಂತರವಾಗಿ ದಂಡ ಹಾಕುತ್ತಾರೆ. ಈ ಕಾರಣದಿಂದ ನಾವು ಅಲ್ಲಿಗೆ ಹೋಗುವುದಿಲ್ಲ ಎಂದು ಆಟೋ ಚಾಲಕರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.