Breaking News

ಪೆರಿಯಡ್ಕ: ಯುವಕ ವಿಷ ಸೇವಿಸಿ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕ ಬೊಳ್ಳಾವು ನಿವಾಸಿ ಅವಿವಾಹಿತ ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ವ್ಯಕ್ತಿ ಪೆರಿಯಡ್ಕ ಬೊಳ್ಳಾವು ನೆಕ್ಕರೆ ನಿವಾಸಿ ಸುರೇಂದ್ರ ಗೌಡ ಎಂಬವರ ಪುತ್ರ ಪ್ರಕಾಶ್ ಗೌಡ (23 ವ.) ಆತ್ಮಹತ್ಯೆ ಮಾಡಿಕೊಂಡವರು. ಪ್ರಕಾಶ್ ಮಂಗಳವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದು, ರಾತ್ರಿ ಈತ ಮನೆಗೆ ಬರದಿದ್ದಾಗ ಮನೆಯವರು ಹುಡುಕಾಡಿದ್ದರು. ಬುಧವಾರ ಬೆಳಿಗ್ಗೆ ಮನೆ ಸಮೀಪದ ಬೊಳ್ಳಾವು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಗುಡ್ಡದಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 ಪ್ರಕಾಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಸಹೋದರ ಪ್ರವೀಣ್ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

20160119222203

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.