ಬಾಯಂಬಾಡಿ ಷಣುಖ ದೇವಸ್ಥಾನದ ಜಾತ್ರೋತ್ಸವ-ಹೊರೆ ಕಾಣಿಕೆ

bayambadiಪುತ್ತೂರು: ಬಾಯಂಬಾಡಿ ಷಣ್ಮುಖ ದೇವಸ್ತಾನದ ವರ್ಷಾವಧಿ ಮಹೋತ್ಸವದ ಪ್ರಯುಕ್ತ ಉಗ್ರಾಣ ಮುಹೂರ್ತ ಹಾಗೂ ಭಕ್ತಾದಿಗಳಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆಯು ಜ.೨೦ರಂದು ನಡೆಯಿತು. ಜ.21 ರಂದು ಬೆಳಿಗ್ಗೆ ಆಶ್ಲೇಷ ಬಲಿ ಪೂಜೆ, ನಾಗನ ಕಟ್ಟೆಯಲ್ಲಿ ಕಲಶಾಭಿಷೇಕ ತಂಬಿಲ ಸೇವೆ ಹಾಗೂ ಮಹಾ ವಿಷ್ಣು ಆರಾಧನೆ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ದುಗ್ಗಳದಿಂದ ಶ್ರೀ ಉಳ್ಳಾಗುಳವರಭಂಡಾರವು ನಾಲಕದಿಂದ ಶ್ರೀ ರಾಜನ್ ದೈವ (ಶಿರಾಡಿ)ದ ಭಂಡಾರವು ಹೊರಟು ಶ್ರೀ ದೇವರ ಸನ್ನಿಧಿಗೆ ಆಗಮಿಸಲಿದೆ. ಬಳಿಕ ರಂಗಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕ್ಕಿ ಉತ್ಸವ, ಕಟ್ಟೆಪೂಜೆ, ಅಶ್ವಥ್ಥ ಕಟ್ಟೆ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.

ಜ.22 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಬಳಿಕ ಇರುವೆರುಳ್ಳಾಕುಳುರವರ ಭಂಡಾರ ದುಗ್ಗಳಕ್ಕೆ ನಿರ್ಗಮನ ಹಾಗೂ ಸಂಜೆಯಿಂದ ರಾತ್ರಿವರೆಗೆ ವ್ಯಾಘ್ರ ಚಾಮುಂಡಿ, ವಾರಾಹಿ ದೈವದ ನೇಮ, ಕಾಣಿಕೆ ಹರಕೆ ಒಪ್ಪಿಗೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಜ.೨೩ರಂದು ಬೆಳಿಗ್ಗೆ ಶ್ರೀ ರಕ್ತೇಶ್ವರಿ, ಧೂಮ್ರ-ಧೂಮಾವತಿ ಮತ್ತು ಶಿರಾಡಿ ದೈವಗಳ ನೇಮ ನಡಾವಳಿ, ಕಾಣಿಕೆ ಹರಕೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.