ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವುದು ಹೇಗೆ? ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1

COMMERCE ASSOCIATION PAPAER REPORT

ಪುತ್ತೂರು : “ಹಿಂದಿನ ಕಾಲದಲ್ಲಿ ಉದ್ಯೋಗಂ ಪುರುಷ ಲಕ್ಷಣಂ ಆಗಿತ್ತು, ಇಂದು ಉದ್ಯೋಗಂ ಮನುಷ್ಯ ಲಕ್ಷಣಂ ಆಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಪದವಿಯೊಂದಿಗೆ ಪ್ರಸ್ತುತ ವಿದ್ಯಮಾನಗಳ ಅರಿವು ಅತ್ಯಗತ್ಯ.  ಅಲ್ಲದೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ಎದುರಿಸಲು ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿರಬೇಕು” ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸವಣೂರು ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಹೇಳಿದರು. ಅವರು ಜ.23 ರಂದು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವುದು ಹೇಗೆ? ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಭಾರ ಪ್ರಾಚಾರ್ಯ ಶೇಷಗಿರಿ ಎಂ ರವರು ಮಾತನಾಡಿ ”ಮಕ್ಕಳು ಓದಿನ ಜೊತೆಗೆ ಶಿಸ್ತು, ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕು” ಎಂದು ಹೇಳಿದರು. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಸೀತಾರಾಮ ಕೇವಳ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಾಣಿಜ್ಯ ಸಂಘದ ಸಂಘಟಕರು ಹಾಗೂ ಉಪನ್ಯಾಸಕರುಗಳಾದ ಗೀತಾ ಡಿ ಹಾಗೂ ಅಶ್ವಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶ್ರುತಿ ಮತ್ತು ಬಳಗದವರು ಪ್ರಾರ್ಥನೆಗೈದರು. ವಾಣಿಜ್ಯ ಸಂಘದ ಕಾರ್ಯದರ್ಶಿ ತೃತೀಯ ಬಿ.ಕಾಂ. ವಿದ್ಯಾರ್ಥಿ ಜೈಕಿರಣ್  ಸ್ವಾಗತಿಸಿದರು.  ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಅಪೂರ್ವ ಡಿ ಸಂಪನ್ಮೂಲ ವ್ಯಕ್ತಿಯ ಕಿರುಪರಿಚಯವನ್ನು ಮಾಡಿದರು.  ವಾಣಿಜ್ಯ ಸಂಘದ ಉಪಕಾರ್ಯದರ್ಶಿ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ವಿದ್ಯಾಶ್ರೀ  ವಂದಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿ ರೌಫ್ ಎಂ ಎಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.