ಗೋಳಿತ್ತೊಟ್ಟು ಗ್ರಾ.ಪಂ.ಮಹಿಳಾ ಗ್ರಾಮ ಸಭೆ; ಲೋಕಸಭೆ, ವಿಧಾನಸಭಾ ಚುನಾವಣೆಯಲ್ಲೂ ಮಹಿಳಾ ಮೀಸಲಾತಿ ಜಾರಿಗೆ ಬರಲಿ, ಆಗ್ರಹ: ನಿರ್ಣಯ

Puttur_Advt_NewsUnder_1
Puttur_Advt_NewsUnder_1

8ಪುತ್ತೂರು: ಜಿ.ಪಂ.ಚುನಾವಣೆ ತನಕ ಮಾತ್ರ ಮಹಿಳಾ ಮೀಸಲಾತಿ ಇದ್ದು, ಇದು ಲೋಕಸಭೆ, ವಿಧಾನಸಭಾ ಚುನಾವಣೆಯಲ್ಲೂ ಜಾರಿಗೆ ಬರಬೇಕೆಂದು ಗೋಳಿತ್ತೊಟ್ಟು ಗ್ರಾ.ಪಂ.ಮಹಿಳಾ ಗ್ರಾಮಸಭೆಯಲ್ಲಿ ಆಗ್ರಹ ವ್ಯಕ್ತವಾಗಿದ್ದು ಈ ಬಗ್ಗೆ ಸರಕಾರಕ್ಕೆ ಬರೆಯಲು ನಿರ್ಣಯ ಅಂಗೀಕರಿಸಲಾಗಿದೆ.
ಸಭೆ ಜ.18ರಂದು ಗ್ರಾ.ಪಂ.ಅಧ್ಯಕ್ಷೆ ಶಾಲಿನಿಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಹಿಳೆಯರು, ಚುನಾವಣೆಯಲ್ಲಿ ಸ್ಪರ್ಧಿಸಲು ಗ್ರಾ.ಪಂ., ತಾ.ಪಂ., ಜಿ.ಪಂ.ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಇದೆ. ಆದರೆ ಲೋಕಸಭೆ, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಮೀಸಲಾತಿ ಇರುವುದಿಲ್ಲ. ಇಲ್ಲೂ ಮೀಸಲಾತಿ ಕಲ್ಪಿಸಿದಲ್ಲಿ ಮಹಿಳೆಯರೂ ಮುಖ್ಯಮಂತ್ರಿ, ಪ್ರಧಾನಮಂತ್ರಿ ಹುದ್ದೆ ಪಡೆಯಬಹುದು. ಆದ್ದರಿಂದ ಲೋಕಸಭೆ, ವಿಧಾನಸಭಾ ಚುನಾವಣೆಯಲ್ಲೂ ಮಹಿಳಾ ಮೀಸಲಾತಿ ಜಾರಿಗೆ ತರಬೇಕೆಂದು ಆಗ್ರಹಿಸಿದರು. ಇದಕ್ಕೆ ಸಹಮತ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಸರಕಾರಕ್ಕೆ ಬರೆಯಲು ನಿರ್ಣಯ ಕೈಗೊಳ್ಳಲಾಯಿತು.

ಸಮಾನ ಕೂಲಿಗೆ ಆಗ್ರಹ
ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ದುಡಿಯುತ್ತಾರೆ. ಆದರೆ ಕೂಲಿ ಪಾವತಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ತಾರತಮ್ಯ ನಿವಾರಿಸಿ ಎಲ್ಲರಿಗೂ ಒಂದೇ ರೀತಿ ಕೂಲಿ ಪಾವತಿಗೂ ಕ್ರಮ ಕೈಗೊಳ್ಳಬೇಕೆಂದು ಮಹಿಳೆಯರು ಆಗ್ರಹಿಸಿದರು. ಈ ಬಗ್ಗೆ ಸಂಬಂಧಿಸಿದವರಿಗೆ ಮನವಿ ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಪುಷ್ಪಲತಾ ಕೊಲೆ-ನ್ಯಾಯ ದೊರೆತಿಲ್ಲ:

ತಾಲೂಕಿನಲ್ಲಿ ಮಹಿಳೆ ಶಾಸಕಿಯಾಗಿದ್ದಾರೆ. ಜಿ.ಪಂ., ಹಾಗೂ ತಾ.ಪಂ.ಅಧ್ಯಕ್ಷೆಯೂ ಮಹಿಳೆಯರೇ ಆಗಿದ್ದಾರೆ. ಆದರೂ ಉಪ್ಪಿನಂಗಡಿಯಲ್ಲಿ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣದಲ್ಲಿ ಇನ್ನೂ ನ್ಯಾಯ ದೊರೆತಿಲ್ಲ ಎಂಬ ಅಸಮಾಧಾನವೂ ಸಭೆಯಲ್ಲಿ ವ್ಯಕ್ತಗೊಂಡಿತ್ತು. ಮಹಿಳೆಯರು ಉನ್ನತ ಸ್ಥಾನದಲ್ಲಿದ್ದರೂ ಮಹಿಳೆಯರಿಗೆ ನ್ಯಾಯ ದೊರೆಯುತ್ತಿಲ್ಲ. ಪುಷ್ಪಲತಾ ಕೊಲೆ ಪ್ರಕರಣ ಸೇರಿದಂತೆ ಮಹಿಳೆಯರಿಗೆ ಆಗಿರುವ ಅನ್ಯಾಯದ ವಿರುದ್ಧ ಮಹಿಳೆಯರೇ ಧ್ವನಿ ಎತ್ತಬೇಕೆಂಬ ಆಗ್ರಹವೂ ಸಭೆಯಲ್ಲಿ ವ್ಯಕ್ತಗೊಂಡಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ತಾ.ಪಂ.ಸದಸ್ಯೆ ಉಷಾ ಅಂಚನ್, ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಮಹಿಳೆ ಸಬಲೀಕರಣಗೊಳ್ಳಬೇಕಿದೆ. ಇದಕ್ಕೆ ಮಹಿಳೆಯರಿಂದಲೇ ಪ್ರೋತ್ಸಾಹ ಸಿಗಬೇಕು. ಮಹಿಳೆಯರು ಕಾನೂನಿನ ಬಗ್ಗೆ ತಿಳಿದುಕೊಂಡು ಸಮರ್ಥವಾಗಿ ಹೋರಾಡಬೇಕೆಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಉಮಾವತಿ ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಶೇಖರಪೂಜಾರಿ, ಉಪಾಧ್ಯಕ್ಷ ಪ್ರಸಾದ್ ಕೆ.ಪಿ.ಸಂದರ್ಭೋಚಿತವಾಗಿ ಮಾತನಾಡಿದರು. ಗ್ರಾ.ಪಂ.ಸದಸ್ಯೆಯರಾದ ಗಾಯಾತ್ರಿ, ಮೀನಾಕ್ಷಿ, ಭವ್ಯಾ ಸುನೀತಾ ಡಿ., ವಿಶ್ವನಾಥ ಮೂಲ್ಯ, ನೇಮಿರಾಜ್, ಪುರುಷೋತ್ತಮ ಜಿ., ಹೇಮಲತಾ, ನೀಲಪ್ಪ ನಾಯ್ಕ್ ಉಪಸ್ಥಿತರಿದ್ದರು. ಪಿಡಿಒ ತಿರುಪತಿ ಟಿ ಉಪ್ಪಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.