Breaking News

ಸಾಲೆತ್ತೂರು: ವೈನ್ ಶಾಪ್‌ನಿಂದ ಕಳ್ಳತನ

Puttur_Advt_NewsUnder_1
Puttur_Advt_NewsUnder_1

salethuru

ವಿಟ್ಲ: ವೈನ್‌ಶಾಪ್‌ ವೊಂದಕ್ಕೆ ನುಗ್ಗಿದ ಕಳ್ಳರು ಸಾವಿರಾರು ರೂ. ನಗದು ಎಗರಿಸಿ ಪರಾರಿಯಾಗಿರುವ ಘಟನೆ ಕೊಳ್ನಾಡು ಗ್ರಾಮದ ಸಾಲೆತ್ತೂರು ಎಂಬಲ್ಲಿ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮಂಗಳೂರು ಸಮೀಪದ ಕೊಡಿಯಾಲ್‌ಬೈಲ್ ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಸೇರಿದ ಸಾಲೆತ್ತೂರು ಎಂಬಲ್ಲಿರುವ ವಿಕ್ಕಿ ವೈನ್‌ಶಾಪ್‌ನ ಮುಂದಿನ ಶಟರ್‌ಗಳನ್ನು ಮುರಿದು ಒಳನುಗ್ಗಿದ ಕಳ್ಳರು 23 ಸಾವಿರ ರೂ. ಹಣವನ್ನು ಕಳವುಗೈದಿದ್ದಾರೆ. ಅಂಗಡಿ ಮಾಲಕರು ಭಾನುವಾರ ಬೆಳಿಗ್ಗೆ ಅಂಗಡಿಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೊಳ್ನಾಡು ಗ್ರಾಮದ ಸಾಲೆತ್ತೂರು ಪ್ರದೇಶ ಸೂಕ್ಷ್ಮ ಪ್ರದೇಶವಾಗಿದ್ದು, ಇದು ಕೇರಳ ರಾಜ್ಯವನ್ನು ಸಮಪರ್ಕಿಸುವ ಪ್ರದೇಶವಾಗಿದೆ. ಇಲ್ಲಿ ಇಂತಹ ಹಲವಾರು ಘಟನೆಗಳು ನಡೆಯುತ್ತಿದೆ. ಈ ಭಾಗದಲ್ಲಿ ಪೊಲೀಸ್ ಹೊರಠಾಣೆ ನಿರ್ಮಿಸಬೇಕೆಂದು ಈ ಹಿಂದೆ ಒತ್ತಾಯಿಸಲಾಗಿತ್ತು. ಮುಂದಿನ ದಿನಗಳಲ್ಲಿ ಇಲ್ಲಿ ಹೊರಠಾಣೆ ನಿರ್ಮಿಸಬೇಕು. ಅದಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಬೇಕಾದ ಮೂಲಭೂತ ಸೌಕರ್ಯವನ್ನು ಒದಗಿಸಲಾಗುವುದು ಎಂದು ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.