ಸಂತ ಫಿಲೋಮಿನಾ ಕಾಲೇಜಿನಲ್ಲಿ ದ.ಕ ಜಿಲ್ಲಾಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ

ಪುತ್ತೂರು:ದ.ಕ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆಯು ಜ.25ರಂದು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಸಿಲ್ವರ್ ಜ್ಯುಬಿಲಿ ಹಾಲ್‌ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ವಿ ನಾಗರಾಜ್ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಸಭಾಧ್ಯಕ್ಷತೆ ವಹಿಸಿ ಗುರುತಿನ ಚೀಟಿ ವಿತರಿಸಿದರು. ದ.ಕ ಜಿಲ್ಲಾ SVEEP ಸಮಿತಿ ಅಧ್ಯಕ್ಷರೂ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀವಿದ್ಯಾ ಪಿ.ಐ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಸವಣೂರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ.ವಿ ಸೂರ್ಯನಾರಾಯಣ ಪ್ರಧಾನ ಭಾಷಣ ಮಾಡಿದರು. ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ.ರಾಜೇಂದ್ರ ಕೆ.ವಿ, ಎ.ಎಸ್ಪಿ ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಕುಮಾರ್, ಸಂತ ಫಿಲೋಮಿನಾ ಸ್ನಾತಕೋತ್ತರ ವಿಭಾಗದ ಕ್ಯಾಂಪಸ್ ನಿರ್ದೇಶಕ ಆ್ಯಂಟನಿ ಪ್ರಕಾಶ್ ಉಪಸ್ಥಿತರಿದ್ದರು. ಡಾ. ರಾಜೇಂದ್ರ ಕೆ.ವಿ ಸ್ವಾಗತಿಸಿ, ತಹಶೀಲ್ದಾರ್ ಸಣ್ಣರಂಗಯ್ಯ ವಂದಿಸಿದರು. ನಿವೃತ್ತ ಶಿಕ್ಷಕ ಬಿ.ಜೆ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸಭೆಯಲ್ಲಿ ತಾ.ಪಂ ಅಧ್ಯಕ್ಷೆ ಪುಲಸ್ತ್ಯ ರೈ, ಉಪತಹಶೀಲ್ದಾರ್ ಶ್ರೀಧರ್, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಕಂದಾಯ ನಿರೀಕ್ಷಕ ದಯಾನಂದ ಹೆಗ್ಡೆ, ಲೋಕೋಪಯೋಗಿ ಇಂಜಿನಿಯರ್ ಪ್ರಮೋದ್, ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

20160124224423 20160124224422

20160124220634 20160124220636

Filomena college audience

Vote 4

Vote 3

Vote 2

Vote 1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.