ನೆಲ್ಯಾಡಿ ಗ್ರಾ.ಪಂ.ಮಕ್ಕಳ ಗ್ರಾಮಸಭೆ- ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸದ ಮನೆಯವರಿಗೆ ಸಿಗುವ ಸರಕಾರಿ ಸೌಲಭ್ಯ ತಡೆಗೆ ಆಗ್ರಹ

Puttur_Advt_NewsUnder_1
Puttur_Advt_NewsUnder_1

nelyady

ಪುತ್ತೂರು: ಸರಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸದ ಮನೆಯವರಿಗೆ ಸಿಗುವ ಸರಕಾರಿ ಸೌಲಭ್ಯ ತಡೆಹಿಡಿಯುವಂತೆ ನೆಲ್ಯಾಡಿ ಗ್ರಾ.ಪಂ.ಮಕ್ಕಳ ಗ್ರಾಮಸಭೆಯಲ್ಲಿ ಆಗ್ರಹ ವ್ಯಕ್ತಗೊಂಡಿದೆ.

ಸಭೆ ಜ.16ರಂದು ವಿದ್ಯಾರ್ಥಿನಿ ರಕ್ಷಿತಾರವರ ಅಧ್ಯಕ್ಷತೆಯಲ್ಲಿ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಕ್ಕಳು, ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದು ಮಕ್ಕಳ ಕಲಿಕೆಯ ಮೇಲೂ ಪರಿಣಾಮ ಬೀರುತ್ತಿದೆ. ಎಲ್ಲರಿಗೂ ಸರಕಾರದಿಂದ ಸಿಗುವ ಸವಲತ್ತುಗಳು ಬೇಕಾಗಿವೆ. ಆದರೆ ಎಲ್ಲಾ ಸೌಲಭ್ಯವಿದ್ದರೂ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿಲ್ಲ. ಆದ್ದರಿಂದ ಸರಕಾರಿ ಶಾಲೆಗಳ ಬಗ್ಗೆ ಅಸಡ್ಡೆ ತೋರುವ, ಸರಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿದ ಮನೆಯವರಿಗೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ತಡೆಹಿಡಿಯುವಂತೆ ಆಗ್ರಹಿಸಿದರು. ಈ ಬಗ್ಗೆ ಸರಕಾರಕ್ಕೆ ಬರೆಯಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಅಲ್ಲದೇ ಮಕ್ಕಳು ಶಾಲೆಯಿಂದ ಹೊರಗುಳಿದರೆ ಆ ಶಾಲೆಯ ಶಿಕ್ಷಕರು ಅಥವಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರಕಾರವು ಶಾಲೆಯಿಂದ ಹೊರಗುಳಿದ ಮಕ್ಕಳ ತಂದೆ, ತಾಯಿಯವರಿಗೆ ನೀಡುತ್ತಿರುವ ಸರಕಾರಿ ಸೌಲಭ್ಯ ತಡೆಹಿಡಿಯುವ ಪ್ರಯತ್ನ ಮಾಡಿದರೆ ತಂದೆ, ತಾಯಿ ಹೆಚ್ಚಿನ ಕಾಳಜಿ ವಹಿಸಲು ಸಾಧ್ಯವಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕೆಂಬ ಆಗ್ರಹವೂ ವ್ಯಕ್ತವಾಯಿತು.

ಗ್ರಾ.ಪಂ.ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಮಾತನಾಡಿ, ಸಭೆಯಲ್ಲಿ ಬಂದ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಆದ್ಯತೆ ಮೇರೆಗೆ ಈಡೇರಿಸುವ ಭರವಸೆ ನೀಡಿದರು. ಗ್ರಾ.ಪಂ.ಸದಸ್ಯ ಅಬ್ದುಲ್ ಹಮೀದ್ ಸಂದರ್ಭೋಚಿತವಾಗಿ ಮಾತನಾಡಿದರು. ಅಂಗನವಾಡಿ ಮೇಲ್ವಿಚಾರಕಿ ಉಮಾವತಿಯವರು ಮಕ್ಕಳ ಹಕ್ಕು ಮತ್ತು ಕಾಯಿದೆಗಳ ಬಗ್ಗೆ ಮಾಹಿತಿ ನೀಡಿದರು. ಕಿರಿಯ ಆರೋಗ್ಯ ಸಹಾಯಕಿ ಯಶೋಧರವರು ಆರೋಗ್ಯ ಇಲಾಖೆ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ಉಮಾವತಿ ಕೆ., ಸದಸ್ಯರುಗಳಾದ ಫ್ಲೋರಿನಾ ಡಿ.ಸೋಜಾ, ಶೇಖ್ ಶಬ್ಬೀರ್ ಸಾಹೇಬ್, ಕೆ.ಪಿ.ಅಬ್ರಹಾಂ, ಮೋಹಿನಿ, ಲೈಲಾ ತೋಮಸ್, ಉಮಾವತಿ ದರ್ಖಾಸು, ಚಿತ್ರಾ ಕೆ., ನೆಲ್ಯಾಡಿ ಶಾಲೆಯ ವಿದ್ಯಾರ್ಥಿ ನಾಯಕಿ ಕು.ಮುಬಶಿರಾ, ಪುಚ್ಚೇರಿ ಶಾಲೆಯ ವಿದ್ಯಾರ್ಥಿ ನಾಯಕ ಅಕ್ಷಯ್ ಪಿ. ಪಡುಬೆಟ್ಟು ಶಾಲೆಯ ವಿದ್ಯಾರ್ಥಿ ನಾಯಕಿ ಕು.ಶರಣ್ಯ, ಗ್ರಾ.ಪಂ.ಪಿಡಿಒ ದೇವರಾಜ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ನೆಲ್ಯಾಡಿ ಶಾಲೆಯ ಮುಖ್ಯ ಶಿಕ್ಷಕ ಆನಂದ ಅಜಿಲ, ಪುಚ್ಚೇರಿ ಶಾಲೆಯ ಮುಖ್ಯ ಶಿಕ್ಷಕ ಪದ್ಮನಾಭ ಪಿ., ಶಿಕ್ಷಕ ಪುರಂದರ ಗೌಡ, ಪಡುಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ಅನ್ನಮ್ಮ ಸಿ.ಜೆ., ಪಡುಬೆಟ್ಟು ಪ್ರೌಢಶಾಲೆಯ ಸಹಶಿಕ್ಷಕರುಗಳಾದ ಮಂಜುನಾಥ, ಜಯಪ್ಪ, ಅಂಗನವಾಡಿ ಕಾರ್ಯಕರ್ತೆರು ಉಪಸ್ಥಿತರಿದ್ದರು. ಪಡುಬೆಟ್ಟು ಪ್ರೌಢಶಾಲೆಯ ವಿದ್ಯಾರ್ಥಿ ನಾಯಕ ವಿನೋದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.