ನಗರಸಭೆಯಲ್ಲಿ ಪ.ಜಾತಿ, ಪಂಗಡದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯಧನ-ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಗರಸಭೆಯ ಶೆ.10ರ ನಿಧಿಯಡಿ ನಗರಸಭಾ ವ್ಯಾಪ್ತಿಯ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಮೇಲಿನ ವಿವಿಧ ಹಂತದ ಶಿಕ್ಷಣಕ್ಕೆ ರೂ.1.90 ಲಕ್ಷ ಸಹಾಯಧನ ಕಾದಿರಿಸಲಾಗಿದೆ. ಸಹಾಯಧನ ಪಡೆಯಲು ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಅಥವಾ ಸಹಾಯಧನ ಹಾಲಿ ಶೈಕ್ಷಣಿಕ ವರ್ಷದಲ್ಲಿ ಪಡೆದಿರುವುದಿಲ್ಲ ಎಂಬ ನಿರಾಕ್ಷೇಪಣಾ ಪತ್ರ, ಶಿಕ್ಷಣ ಸಂಸ್ಥೆಯಿಂದ ಪ್ರಸ್ತುತ ಕಲಿಯುತ್ತಿರುವ ಬಗ್ಗೆ ದೃಡೀಕರಣ ಪತ್ರ, ಆದಾಯ ದೃಢ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಭಾವಚಿತ್ರ, ಪಡಿತರ ಚೀಟಿಯ ನಕಲು, ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ನಾತಕೋತ್ತರ ತರಗತಿಗೆ ಹಾಜರಾದ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿ ಎಂದು ಪೌರಾಯುಕ್ತೆ ರೇಖಾ ಜೆ.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.