ಬೆಳವಣಿಗೆ ಕುಂಠಿತವಾದ ಮಕ್ಕಳ ಆರೋಗ್ಯ ತಪಾಸಣೆ, ಪೌಷ್ಠಿಕಾಂಶಗಳ ವಿತರಣೆ

Puttur_Advt_NewsUnder_1
Puttur_Advt_NewsUnder_1

arogya1 arogya

ಪುತ್ತೂರು: ರೋಟರಿ ಕ್ಲಬ್ ಪುತ್ತೂರು, ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಚೇತನಾ ಆಸ್ಪತ್ರೆಯ ಸಹಯೋಗದಲ್ಲಿ ಬೆಳವಣಿಗೆ ಕುಂಠಿತವಾದ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಪೌಷ್ಠಿಕಾಂಶಗಳ ವಿತರಣೆ ಕಾರ್ಯಕ್ರಮವು ಜ.18 ರಂದು ಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞ ಡಾ|ಶ್ರೀಕಾಂತ್ ರಾವ್‌ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗ್ಡೆ, ಮೇಲ್ವಿಚಾರಕರಾದ ದಮಯಂತಿ, ಜಲಜಾಕ್ಷಿ, ಆರತಿ, ವನಿತ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಜಯಂತಿ ಆರ್ ಗೌಡ ಅಲೆಪ್ಪಾಡಿ, ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ರಫೀಕ್ ಎಂ.ಜಿ., ಕಾರ್ಯದರ್ಶಿ ಪರಮೇಶ್ವರ ಗೌಡ, ಲಿಟೆರಸಿ ಚೇರ್‌ಮ್ಯಾನ್ ಪ್ರೊ.ಝೇವಿಯರ್ ಡಿ’ಸೋಜ, ಕೋಶಾಧಿಕಾರಿ ಸುರೇಶ್ ಶೆಟ್ಟಿ, ನಿಯೋಜಿತ ಕಾರ್ಯದರ್ಶಿ ಜಗಜೀವನ್ ದಾಸ್ ರೈರವರು ಉಪಸ್ಥಿತರಿದ್ದರು.

ಪ್ರತಿ ವಾರದ ಶುಕ್ರವಾರ ದಿನದಂದು ಬೆಳವಣಿಗೆ ಕುಂಠಿತವಾದ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಪೌಷ್ಠಿಕಾಂಶ ಆಹಾರ ವಿತರಣೆಯನ್ನು ರೋಟರಿ ಕ್ಲಬ್ ಪುತ್ತೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿದೆ. ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು.

 ರಫೀಕ್ ಎಂ.ಜಿ. ಅಧ್ಯಕ್ಷರು, ರೋಟರಿ ಕ್ಲಬ್ ಪುತ್ತೂರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.