ವಿಟ್ಲ : ವಗೆನಾಡು ಶ್ರೀ ಸುಬ್ರಾಯದೇವಸ್ಥಾನದಲ್ಲಿ ಶ್ರೀ ಸುಬ್ರಾಯದೇವರ ಬಿಂಬ ಪುನಃ ಪ್ರತಿಷ್ಠೆ, ಜೀವಕಲಶಾಭಿಷೇಕ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ವೇ ಮೂ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಗಣಪತಿದೇವರ ಸಹಿತ ಶ್ರೀ ಸುಬ್ರಾಯದೇವರ ಬಿಂಬ ಪುನಃ ಪ್ರತಿಷ್ಠಾ ಕಾರ್ಯ ಅಷ್ಟಬಂಧ ಪ್ರತಿಷ್ಠೆ ಸೇರಿ ವಿವಿಧ ವೈದಿಕ ಕಾರ್ಯಕ್ರಮಗಳು ಜ.28 ರಂದು  ನಡೆಯಿತು.

ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಸಾಧ್ವೀ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗಣಪತಿ ದೇವರ ಸಹಿತ ಶ್ರೀ ಸುಬ್ರಾಯದೇವರ ಬಿಂಬ ಪುನಃ ಪ್ರತಿಷ್ಠೆ, ಅಷ್ಟಬಂಧ ಪ್ರತಿಷ್ಠೆ, ಜೀವ ಕಲಶಾಭಿಷೇಕ, ಮಂತ್ರ ಕಲಶಾಭಿಷೇಕ, ಮಂತ್ರನ್ಯಾಸಾದಿಗಳು ಪ್ರತಿಷ್ಠಾ ಬಲಿ ನಡೆಯಿತು.

ಆಡಳಿತ ಮೊಕ್ತೇಸರ ಮುಗುಳಿ ತಿರುಮಲೇಶ್ವರ ಭಟ್, ಪಟ್ಲಗುತ್ತು ಮಹಾಬಲ ಶೆಟ್ಟಿ, ಅಧ್ಯಕ್ಷ ಒ. ಶ್ಯಾಮ ಭಟ್ ಒಡಿಯೂರು, ಕಾರ್ಯಾಧ್ಯಕ್ಷ ಟಿ. ಪ್ರದೀಪ ಶೆಟ್ಟಿ ಗುಬ್ಯಗುತ್ತು, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲ ಗುತ್ತು, ಕೋಶಾಧಿಕಾರಿ ದಿನೇಶ್ ಶೆಟ್ಟಿ ಪಟ್ಲಗುತ್ತು, ಆರ್ಥಿಕ ಸಮಿತಿ ಪ್ರಧಾನ ಪ್ರಸಿದ್ಧ ಭಾಗವತ ಸತೀಶ ಶೆಟ್ಟಿ ಪಟ್ಲಗುತ್ತು, ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾಗಿ ಪಟ್ಲಗುತ್ತು ಮಹಾಬಲ ಶೆಟ್ಟಿ, ಕಾರ್ಯಾಧ್ಯಕ್ಷ ಟಿ.ತಾರಾನಾಥ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ವಿಘ್ನೇಶ್ವರ ಭಟ್ ಅನೆಯಾಲ ಕೋಡಿ, ಕೋಶಾಧಿಕಾರಿ ಬಾಲಕೃಷ್ಣ ಶೆಟ್ಟಿ ಅನೆಯಾಲ ಮಂಟಮೆ, ಆರ್ಥಿಕ ಸಮಿತಿ ಪ್ರಧಾನ ಶ್ರೀಧರ ಶೆಟ್ಟಿ ಮೇಗಿನಗುತ್ತು ಗುಬ್ಯ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

28vtl2 vagenadu

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.