Breaking News

ಪೆರಿಯಶಾಂತಿ : ಪಿಕಪ್ – ಬಸ್ ಮುಖಾಮುಖಿ ಡಿಕ್ಕಿ : ಐವರಿಗೆ ಗಾಯ

Puttur_Advt_NewsUnder_1
Puttur_Advt_NewsUnder_1

ಪೆರಿಯಶಾಂತಿ: ಪಿಕಪ್, ಬಸ್ ಮುಖಾಮುಖಿ ಡಿಕ್ಕಿ-6 ಮಂದಿ ಪ್ರಯಾಣಿಕರಿಗೆ ಗಾಯ

ಪುತ್ತೂರು: ಪಿಕಪ್ ಜೀಪು ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪಿಕಪ್ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜ.29ರಂದು ಸಂಜೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಖಾಸಗಿ ಬಸ್ ವಿಜಯಲಕ್ಷ್ಮಿ (ಕೆಎ 09 ಡಿ 1104) ಹಾಗೂ ಉದನೆಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಪಿಕಪ್ ಜೀಪು (ಕೆಎ21 ಬಿ 3197)ನಡುವೆ ಪೆರಿಯಶಾಂತಿ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಪಿಕಪ್ ಜೀಪ್ ಚಾಲಕ ರಿಜು ಮೇಥ್ಯು(30ವ.) ಪ್ರಯಾಣಿಕರಾದ ವಿಲಾಸ್, ಲಾಲೂದೇವ್, ಅಭಿಮನ್ಯು ಮೊಬಿಯಾ, ಅಖಿಲೇಶ್ ಎಂಬವರು ಗಾಯಗೊಂಡಿದ್ದು ಮಂಗಳೂರಿನ ಮಂಗಳಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇವರೆಲ್ಲರೂ ಬಿಹಾರ ಮೂಲದವರಾಗಿದ್ದು ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ಸಂಪೂರ್ಣ ನಜ್ಜುಗೊಂಡಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

20160129041038

20160129041037 20160129041037 (1) 20160129041037 (2)

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.