ಉಪ್ಪಿನಂಗಡಿಯಲ್ಲಿ “ಎಸ್‌ಎಸ್‌ಎಲ್‌ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ”ಕಾರ‍್ಯಾಗಾರ

Puttur_Advt_NewsUnder_1
Puttur_Advt_NewsUnder_1

uppi

ಉಪ್ಪಿನಂಗಡಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಶಿಶು ಅಭಿವೃದ್ಧಿ ಇಲಾಖೆ ಪುತ್ತೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ “ಎಸ್‌ಎಸ್‌ಎಲ್‌ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ”ಉಪ್ಪಿನಂಗಡಿ ಹೋಬಳಿ ಮಟ್ಟದ 1 ದಿನದ ಕಾರ‍್ಯಾಗಾರ ಜ. 28ರಂದು ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು.  ಕಾರ‍್ಯಗಾರವನ್ನು ಉಪ್ಪಿನಂಗಡಿ ಪ.ಪೂ. ಕಾಲೇಜು ಅಭಿವೃದ್ಧಿ ಸಮಿತಿ ಕಾರ‍್ಯಾಧ್ಯಕ್ಷ ಎ. ರಘುನಾಥ ರೈ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಿಕ್ಷಣ ವ್ಯವಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಮೊದಲ ಘಟ್ಟ, ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಕೆಯ ಗುರಿಯೊಂದಿಗೆ ಶಾಲೆಗೆ, ತಾಲ್ಲೂಕಿಗೆ ಹೆಸರು ತರುವ ಕೆಲಸ ಮಾಡಬೇಕು ಎಂದರು. ಗ್ರಾ. ಪಂ. ಸದಸ್ಯ ಯು.ಟಿ. ತೌಶೀಫ್ ಮಾತನಾಡಿ ವಿದ್ಯಾರ್ಥಿಗಳು ಇಂದಿನಿಂದಲೇ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು, ಒಳ್ಳೆಯ ಆರೋಗ್ಯದೊಂದಿಗೆ ಉತ್ತಮ ಶಿಕ್ಷಣ ಪಡೆಯುವ ಪಣ ತೊಡಬೇಕು ಎಂದರು. ಕಾಲೇಜಿನ ಉಪ ಪ್ರಾಚಾರ್ಯ ದಿವಾಕರ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ‍್ಯಾಗಾರದಲ್ಲಿ ಶಿಕ್ಷಣ ಸಂಯೋಜಕ ಲೋಕಾನಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ನೀಡಿದರು. ಕಾರ‍್ಯಾಗಾರದಲ್ಲಿ 9 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.  ಶಿಕ್ಷಕ ಕರುಣಾಕರ ಸ್ವಾಗತಿಸಿ, ಶ್ರೀಧರ್ ಭಟ್ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.