ಕೆಯ್ಯೂರು ಜಾತ್ರೆ ಸಂಪನ್ನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಮಾ. ೨೧ರಂದು ಮೊದಲ್ಗೊಂಡು ಮಾ.೨೭ರಂದು ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ಮುಂತಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

ಮಾ.೨೧ರಂದು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು. ಮಾ.೨೩ರಂದು ವಿವಿಧ ವೈದಿಕ ಕಾರ್ಯಕ್ರಮಗಳು, ಮಾ.೨೪ರಂದು ಬೆಳಿಗ್ಗೆ ೧೦೮ ಕಾಯಿ ಮಹಾ ಗಣಪತಿ ಹೋಮ, ಶತ ಚಂಡಿಕಾಯಾಗ, ಹೊರೆಕಾಣಿಕೆ ಸಮರ್ಪಣೆ, ಕಶಾಭಿಷೇಕ, ಅನ್ನಸಂತರ್ಪಣೆ ನಡೆಯಿತು. ಮಾ. ೨೬ರಂದು ರಾತ್ರಿ ಶ್ರೀ ದೇವರಿಗೆ ರಂಗ ಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಮಹೋತ್ಸವ, ವಸಂತ ಕಟ್ಟೆ ಪೂಜೆ, ಕೆಯ್ಯೂರು ಬೆಡಿ ನಡೆಯಿತು. ಮಾ.೨೭ರಂದು ಬೆಳಿಗ್ಗೆ ಮಹಾ ಗಣಪತಿ ಹವನ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ದೇವರಿಗೆ ಕಲಶಾಭಿಷೇಕ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ, ಶ್ರೀ ದೈವಗಳ ಭಂಡಾರ ತೆಗೆಯುವ ಕಾರ‍್ಯಕ್ರಮ ಜರಗಿತು. ಸಾವಿರಾರು ಮಂದಿ ಜಾತ್ರೋತ್ಸವದಲ್ಲಿ ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.