ಆಲಂಕಾರು: ಆಕ್ಟೀವಾ, ಇನ್ನೋವಾ ಡಿಕ್ಕಿ: ಇಬ್ಬರಿಗೆ ಗಾಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಇನ್ನೋವಾ ಚಾಲಕನ ಮೇಲೆ ಹಲ್ಲೆ ಆರೋಪ-ಇಬ್ಬರು ವಶ

ಪುತ್ತೂರು: ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ಆಕ್ಟೀವಾ ಹಾಗೂ ಇನ್ನೋವಾ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಕ್ಟೀವಾ ಸವಾರರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವ ಘಟನೆ ಎ.3ರಂದು ಮಧ್ಯಾಹ್ನ ನಡೆದಿದೆ. ಈ ಮಧ್ಯೆ ಘಟನಾ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಇನ್ನೋವಾ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ತುಸು ಬಿಗುವಿನ ಪರಿಸ್ಥಿತಿಯೂ ನಿರ್ಮಾಣಗೊಂಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಆಕ್ಟೀವಾ ಸವಾರ ಬಜತ್ತೂರು ಗ್ರಾಮದ ಕಾಂಚನ ಬರಮೇಲು ನಿವಾಸಿ ಶ್ರೀಧರ ಪೂಜಾರಿ(೩೮) ಹಾಗೂ ಸಹ ಸವಾರ ಕಾಂಚನ ಬೇರಿಕೆ ನಿವಾಸಿ ಕೊರಗಪ್ಪ ಪೂಜಾರಿ(೪೨) ಗಾಯಗೊಂಡ ವರಾಗಿದ್ದು ಇಬ್ಬರೂ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರೂ ಆಲಂಕಾರಿನಲ್ಲಿ ಸಂಬಂಧಿಕರ ಮದುವೆ ಕಾರ‍್ಯಕ್ರಮ ಮುಗಿಸಿಕೊಂಡು ಮತ್ತೆ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳಾಲ ನಿವಾಸಿ ನಿಜಾಮುದ್ದೀನ್(೩೦ವ.)ಎಂಬವರು ಮಂಗಳೂರಿನಿಂದ ಕಡಬಕ್ಕೆ ಬರುತ್ತಿದ್ದ ಇನ್ನೋವಾ ಕಾರು ಆಲಂಕಾರು ನೆಕ್ಕರೆ ಸಮೀಪ ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಆಕ್ಟೀವಾಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು ಸವಾರ ಶ್ರೀಧರ ಪೂಜಾರಿಯವರ ಎರಡೂ ಕಾಲುಗಳು ಜಖಂಗೊಂಡಿದ್ದು ಹೊಟ್ಟೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ಸಹ ಸವಾರ ಕೊರಗಪ್ಪ ಪೂಜಾರಿಯವರ ಮುಖ ಹಾಗೂ ಕೈಗಳಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಇಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಎಸ್‌ಐ ಉಮೇಶ್ ಉಪ್ಪಳಿಕೆ ಹಾಗೂ ಸಿಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಚಾಲಕನಿಗೆ ಹಲ್ಲೆ: ಇಬ್ಬರು ವಶಕ್ಕೆ: ಅಪಘಾತದ ವೇಳೆ ಘಟನಾ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಕಾರು ಚಾಲಕ ನಿಜಾಮುದ್ಧೀನ್‌ರ ಮೇಲೆ ಹಲ್ಲೆ ನಡೆಸಿರುವ ಘಟನೆಯೂ ನಡೆದಿದೆ. ನಿಜಾಮುದ್ಧೀನ್‌ರವರು ಕಾರೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ರಾಂಗ್ ಸೈಡ್‌ಗೆ ಬಂದು ಆಕ್ಟೀವಾಗೆ ಡಿಕ್ಕಿ ಹೊಡೆದ ಬಳಿಕ ಕಾರನ್ನು ರೈಟ್‌ಸೈಡ್‌ನಲ್ಲಿ ಅಪಘಾತ ನಡೆದ ತುಸು ದೂರದಲ್ಲಿ ನಿಲ್ಲಿಸಿದರು. ಇದೇ ವಿಚಾರದಲ್ಲಿ ಕಾರು ಚಾಲಕ ನಿಜಾಮುದ್ದೀನ್ ಹಾಗೂ ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯ ಸಾರ್ವಜನಿಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಈ ವೇಳೆ ನಿಜಾಮುದ್ಧೀನ್ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಘಟನಾ ಸ್ಥಳಕ್ಕೆ ಬಂದ ಕಡಬ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದ ಗುಂಪು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.