ಅ.7-11: ರಾಮನಗರದಲ್ಲಿ ಶಾರದೋತ್ಸವ

ಉಪ್ಪಿನಂಗಡಿ: ಇಲ್ಲಿನ ರಾಮನಗರದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ವತಿಯಿಂದ 22ನೇ ವರ್ಷದ ಸಾರ್ವಜನಿಕ ಶಾರದೋತ್ಸವವು ಅ.7ರಿಂದ ಅ.11ರವರೆಗೆ ರಾಮನಗರದ  ಶ್ರೀ ಶಾರದಾ ಕಲಾ ಮಂದಿರದಲ್ಲಿ ನಡೆಯಲಿದೆ.

ಅ.7ರಂದು ಬೆಳಗ್ಗೆ ಗಣಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿದ್ದು, ಸಂಜೆ ಶಾರದಾ ಮಾತೆಯ ವಿಗ್ರಹದ ಪ್ರತಿಷ್ಠೆ, ಭಜನಾ ಕಾರ್ಯಕ್ರಮ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸ್ಥಳೀಯ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅ.8ರಂದು ಬೆಳಗ್ಗೆ  ಆಟೋಟ ಸ್ಪರ್ಧೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆಯಾಗಿ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಭಕ್ತಿ ಸಂಗೀತ ಕಾರ್ಯಕ್ರಮ, ಸಂಜೆ ಭಜನೆ ನಡೆಯಲಿದೆ.  ರಾತ್ರಿ ‘ಏರೆಗ್ ಏರ‍್ಲಾ ಇಜ್ಜಿ’ ತುಳು ಹಾಸ್ಯಮಯ ನಾಟಕ ನಡೆಯಲಿದೆ. ಅ.9ರಂದು ಬೆಳಗ್ಗೆ ಆಟೋಟ ಸ್ಪರ್ಧೆ, ರಂಗೋಲಿ ಹಾಗೂ ಶಾರದಾ ಮಾತೆಯ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಮಧ್ಯಾಹ್ನ 10ರಿಂದ ಭಜನೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಭಕ್ತಿ ಗೀತೆ ಸ್ಪರ್ಧೆ, ‘ಯಜ್ಞ ಸಂರಕ್ಷಣೆ’ ತಾಳಮದ್ದಲೆ ನಡೆಯಲಿದೆ. ಬಳಿಕ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಅ.10ರಂದು ಬೆಳಗ್ಗೆ ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಭಜನೆ, ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಡಾ. ರಘು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಹರೀಶ್ ಪೂಂಜಾ ಆಗಮಿಸಲಿದ್ದಾರೆ. ಬಳಿಕ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಅ.11ರಂದು ಬೆಳಗ್ಗೆ ಭಜನೆ, ಮೂರು ವರ್ಷದ ಮೇಲ್ಪಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಕಲಿಕೆ, ಮಧ್ಯಾಹ್ನ ಬಳಿಕ ಅನ್ನಸಂತರ್ಪಣೆ ‘ಹೊಸ ಅಕ್ಕಿ ಊಟ’ ನಡೆಯಲಿದೆ. ಮಧ್ಯಾಹ್ನ ಭಜನೆ ನಡೆದು, ಸಂಜೆ ಶ್ರೀ ಶಾರದಾ ವಿಗ್ರಹದ ಜಲಸ್ತಂಭನ ಶೋಭಾಯಾತ್ರೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಅಡೆಕ್ಕಲ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.