ಅಂತರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ ಪೂರ್ಣಿಮಾರವರಿಗೆ ‘ಕ್ರೀಡಾ ರತ್ನ’ ಪ್ರಶಸ್ತಿ; ಇಂದು ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿಗೆ ಅಂತರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ ಪೂರ್ಣಿಮಾರವರು ಆಯ್ಕೆಯಾಗಿದ್ದಾರೆ. ಅ.7ರಂದು ಮೈಸೂರಿನಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪೂರ್ಣಿಮಾರವರು ಬೆಂಗಳೂರು ಮತ್ತು ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದೇಶದ ತಂಡವನ್ನು ಪ್ರತಿನಿಧಿಸಿದ್ದರು. ಈಕೆ ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಪೆಮಜಲು ಸರಕಾರಿ ಪ್ರೌಢ ಶಾಲೆ ಮತ್ತು ಪಟ್ಟೆ ಶ್ರೀಕೃಷ್ಣ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ. ಪ್ರಸ್ತುತ ಮೂಡಬಿದ್ರೆ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಪಿಎಡ್ ಕಲಿಯುತ್ತಿದ್ದಾರೆ. ಈಕೆ ಅರಿಯಡ್ಕ ಗ್ರಾಮದ ಪಾದೆಲಾಡಿ ನಿವಾಸಿ ಬಾಲಣ್ಣ ಗೌಡ ಮತ್ತು ಉಮಾವತಿ ದಂಪತಿ ಪುತ್ರಿ.

ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ: ಪ್ರಶಸ್ತಿಗೆ ಆಯ್ಕೆಯಾದ ಸಂತಸದಲ್ಲಿರುವ ಪೂರ್ಣಿಮಾರವರನ್ನು ಸಂಪರ್ಕಿಸಿದಾಗ, ‘ನನಗೆ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ನಾನು ಎರಡು ಬಾರಿ ಅಂತರಾಷ್ಟ್ರೀಯ ತ್ರೋಬಾಲ್ ಪಂದ್ಯಾಟದಲ್ಲಿ ಆಟ ಆಡಿದ್ದೇನೆ’ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಶಸ್ತಿ ಪ್ರದಾನ: ಮೈಸೂರಿನ ‘ಅಮೃತೋತ್ಸವ ಭವನ’ ವೈದ್ಯಕೀಯ ಕಾಲೇಜು, ಜೆ.ಕೆ ಮೈದಾನ ಇಲ್ಲಿ ಇಂದು ಸಂಜೆ 4.00 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.