ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ I, IIಎ, IIಬಿ, IIIಎ, IIIಬಿ ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2016-17 ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ I ಎಸ್.ಸಿ ಮತ್ತು ಎಸ್.ಟಿ ರೂ.2.50 ಲಕ್ಷ, ಪ್ರವರ್ಗ IIಎ, IIಬಿ, IIIಎ, IIIಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆಯವರಿಗೆ ರೂ.1.00 ಲಕ್ಷ ಆಗಿರುತ್ತದೆ.

ಅರ್ಜಿಯನ್ನು www.backwardclasses.kar.nic.in ನಲ್ಲಿ ಸಲ್ಲಿಸಬಹುದು.

ವಿಶೇಷ ಸೂಚನೆ: ವಿದ್ಯಾರ್ಥಿಯು ದಿನಾಂಕ24-10-2016ರ ಒಳಗೆ ಆನ್ ಲೈನ್ ಮೂಲಕ ಹಾಕಿದ ಅರ್ಜಿಗಳ ಪ್ರತಿ ಹಾಗೂ ಅಪ್ ಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.