ವಿಟ್ಲ: ಮೈಸೂರು ವಿಭಾಗೀಯ ಪ್ರಾಥಮಿಕ, ಪ್ರೌಢಶಾಲಾ ಹೊನಲು ಬೆಳಕಿನ ಕಬಡ್ಡಿ

Puttur_Advt_NewsUnder_1
Puttur_Advt_NewsUnder_1

vitlaವಿಟ್ಲ: ವಿದ್ಯಾರ್ಥಿಗಳು ಕೆಟ್ಟ ವಿಚಾರಗಳ ಕಡೆಗೆ ಗಮನಹರಿಸದೇ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದಾಗ ದೇಶ ಅಭಿವೃದ್ಧಿ ಹೊಂದುತ್ತದೆ. ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಪ್ರೊ ಕಬಡ್ಡಿ ಬಳಿಕ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ದ.ಕ ಜಿಲ್ಲೆಯ ಅದೆಷ್ಟೋ ಕಬಡ್ಡಿ ಕ್ರೀಡಾಪಟುಗಳು ರಾಜ್ಯಕ್ಕೆ ಹಾಗೂ ದೇಶಕ್ಕೆ ಹೆಸರು ತಂದಿದ್ದು, ಕಬಡ್ಡಿಯಲ್ಲಿ ಜಿಲ್ಲೆಯ ತಂಡ ವಿಶ್ವದಲ್ಲಿ ಮಾನ್ಯತೆ ಪಡೆಯುವ ತಂಡವಾಗಿದೆ ಎಂದು ಸಚಿವ ಬಿ.ರಮಾನಾಥ ರೈ ಹೇಳಿದರು.

ಅವರು ಅ.14ರಂದು ವಿಟ್ಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ದ.ಕ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ವಿಟ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಂಯುಕ್ತ ಆಶ್ರಯದಲ್ಲಿ ನಡೆಯುವ ಮೈಸೂರು ವಿಭಾಗೀಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಬಾಲಕ-ಬಾಲಕಿಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಗ್ರಾಮೀಣ ಭಾಗದ ಕ್ರೀಡಾ ಪಟುಗಳಿಗೆ ಸಹಕಾರಿಯಾಗಲೆಂಬ ನಿಟ್ಟಿನಲ್ಲಿ ವಸತಿ ನಿಲಯ, ಪ್ರಯಾಣ ಭತ್ತ್ಯೆ ಸೇರಿ ವಿವಿಧ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ನೀಡಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ದೇಹದಾರ್ಢ್ಯತೆ ಇದ್ದು, ನಗರಗಳ ಭಾಗದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರತಿಭಾ ಪಲಾಯನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸುವಂತೆ ಮಾಡಲು ಕ್ರೀಡಾ ಪಟುಗಳಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಕಾರ್ಯವಾಗಬೇಕು. ಜಗತ್ತಿನ ಎತ್ತರಕ್ಕೆ ಏರುವ ಪ್ರತಿಭೆಗಳು ಗ್ರಾಮೀಣ ಭಾಗದಿಂದ ಉದಯಿಸಿ ಬರಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಎಲ್ಲಾ ಕ್ರೀಡಾಪಟುಗಳು ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಕಾರ್ಯವಾಗಬೇಕು. ಮೂರು ವರ್ಷಗಳಿಂದ ದಾಖಲೆಯ ರೀತಿಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಗಳು ಪುತ್ತೂರು ಕ್ಷೇತ್ರದಲ್ಲಿ ನಡೆಯುತ್ತಲಿದೆ. ಹಳ್ಳಿಯ ಮಕ್ಕಳಲ್ಲಿರುವ ಧೈರ್ಯ, ಇಚ್ಛಾ ಶಕ್ತಿ ಪಟ್ಟಣದವರಲ್ಲಿಲ್ಲ. ಪಟ್ಟಣದವರಿಗೆ ಪ್ರೋತ್ಸಾಹಗಳು ಸಿಗುತ್ತಿದೆಯಾದರೂ, ಹಳ್ಳಿಯ ಯುವಶಕ್ತಿ ಎಲ್ಲಾ ವಿಭಾಗದಲ್ಲಿ ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ. ಕ್ರೀಡಾ ಪಟುಗಳನ್ನು ಸಂಘ ಸಂಸ್ಥೆಗಳು ಬೆಳೆಸಿ ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕು ಎಂದು ಹೇಳಿದರು.

ದ. ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ. ಜಿಲ್ಲಾ ಪಂಚಾಯತ್ಟ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ ಎಂ ವಿಟ್ಲ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜಯಶ್ರೀ ಕೋಡಂದೂರು, ಎಂ ಎಸ್ ಮಹಮ್ಮದ್, ಕಬಡ್ಡಿ ಪಂದ್ಯಾಟದ ಸಂಚಾಲಕ ರಮಾನಾಥ ವಿಟ್ಲ, ಆರ್ಥಿಕ ಸಮಿತಿ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್ ಉಪಸ್ಥಿತರಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೋ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗುರುನಾಥ ಬಾಗೇವಾಡಿ ಪ್ರಸ್ತಾವನೆಗೈದರು. ಕ್ರೀಡಾಪಟು ಗಾಯತ್ರಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎ ವಂದಿಸಿದರು. ಶಿಕ್ಷಕರಾದ ಸುರೇಶ್ ಕೇಪು, ವಿಶ್ವಾನಾಥ ಕುಳಾಲು ಕಾರ್ಯಕ್ರಮ ನಿರೂಪಿಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿ ಒಟ್ಟು ೩೨ ತಂಡಗಳು ಭಾಗವಹಿಸಿದವು. ೫೦ ಮಂದಿ ಸ್ವಯಂಸೇವಕರಾಗಿ ಹಾಗೂ ಹಲವರು ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅ.೧೫ರಂದು ಸಾಯಂಕಾಲ ಸಮಾರೋಪ ಸಮಾರಂಭ ನಡೆಯಲಿದೆ.

ಕ್ರೀಡಾ ಪಟುಗಳ ಭವ್ಯ ಮೆರವಣಿಗೆ: ಕ್ರೀಡಾಕೂಟ ಆರಂಭವಾಗುವ ಮೊದಲು ವಿಟ್ಲ ಜೈನ ಬಸದಿ ಸಮೀಪದಿಂದ ಡೊಳ್ಳುಕುಣಿತ, ಗೊಂಬೆಗಳು, ಕ್ರೀಡಾಪಟುಗಳ ತಂಡಗಳು ಸೇರಿ ಗಣ್ಯರನ್ನೊಳಗೊಂಡ ಭವ್ಯ ಮೆರವಣಿಗೆ ಮಾದರಿ ಶಾಲೆಯವರೆಗೆ ಸಾಗಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.